Saturday, May 18, 2024
Homeಅಪರಾಧಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅರೆಸ್ಟ್

ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅರೆಸ್ಟ್

spot_img
- Advertisement -
- Advertisement -

ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಹೆಚ್‌ ಡಿ ರೇವಣ್ಣನವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಸಂತ್ರಸ್ತೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೇವಣ್ಣ ಅವರ ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ.

ಎಸ್‌ಐಟಿ ಅಧಿಕಾರಿಗಳು ಪ್ರಕರಣದ ಬೆನ್ನಲ್ಲೇ ರೇವಣ್ಣ ಅವರ ಹುಡುಕಾಟಕ್ಕೆ ಮುಂದಾಗಿದ್ದು, ಇಂದು ಮಾಜಿ ಪ್ರಧಾನಿ ದೇವೇಗೌಡರ ನಿವಾಸದ ಬಳಿಯೇ ಅಧಿಕಾರಿಗಳು ಬಂದು ರೇವಣ್ಣ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಪ್ರಕರಣದ ವಿವರ: ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಆರಂಭಿಸಿತು. ಈ ವೇಳೆ ಎಸ್‌ಐಟಿಯ ಎಸ್ ಪಿಪಿ ಲಿಖಿತ ಆಕ್ಷೇಪಣೆ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯಕ್ ಅವರು, ಇಲ್ಲಿ ಅತ್ಯಾಚಾರ ಪ್ರಕರಮ ಸಾಕ್ಷ್ಯ ವಿಚಾರಣೆ ನಡೆಯುತ್ತಿಲ್ಲ. ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕು. ಇದರಲ್ಲಿ ನಿರಾಧಾರವಾದ ಕಿಡ್ನಾಪ್ ಆರೋಪ ಮಾತ್ರವಿದೆ ಎಂಬುದಾಗಿ ಮನವಿ ಮಾಡಿದರು. ಅಲ್ಲದೇ ಸಂತ್ರಸ್ತೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎಫ್‌ಐಆರ್ ಪ್ರತಿಯನ್ನು ನ್ಯಾಯಪೀಠದ ಮುಂದೆ ಓದಿದರು.

ಹಲವಷ್ಟು ವಾದ ವಿವಾದಗಳ ನಂತರ ರೇವಣ್ಣ ಅವರ ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಆಗಿದೆ. ಆ ನಂತರ ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಹೆಚ್.ಡಿ ರೇವಣ್ಣ ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಕೆಲ ಕಾಲ ಮುಂದೂಡಿತು. ಇದೇ ವೇಳೆ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ನಂತರದಲ್ಲಿ ಅಧಿಕಾರಿಗಳು ಹೆಚ್‌ ಡಿ ರೇವಣ್ಣನವರನ್ನು ದೇವೇಗೌಡರ ನಿವಾಸದ ಬಳಿಯಲ್ಲಿ ಅರೆಸ್ಟ್ ಮಾಡಿದ್ದಾರೆ.

- Advertisement -
spot_img

Latest News

error: Content is protected !!