Wednesday, June 26, 2024
Homeಚಿಕ್ಕಮಗಳೂರುಹೃದಯಾಘಾತದಿಂದ ಕೊನೆಯುಸಿರೆಳೆದ ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್

ಹೃದಯಾಘಾತದಿಂದ ಕೊನೆಯುಸಿರೆಳೆದ ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್

spot_img
- Advertisement -
- Advertisement -

ಶಿವಮೊಗ್ಗ: ಬಿಜೆಪಿ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ.

ಎಂ.ಬಿ‌.ಭಾನುಪ್ರಕಾಶ್ ಅವರಿಗೆ 69 ವರ್ಷ ವಯಸ್ಸಾಗಿದ್ದು, ಅವರು ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾ ಅನುಯಾಯಿಯಾಗಿದ್ದ ಭಾನುಪ್ರಕಾಶ್ ಅವರು 2009 ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ, 2013-19 ರವರೆಗೆ ಎಂಎಲ್ ಸಿಯಾಗಿದ್ದರು. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ಬಿಜೆಪಿಯಿಂದ ಅವರಿಗೆ ಎದುರಾಳಿಯಾಗಿ ಸ್ಪರ್ಧೆ ಮಾಡಿದ್ದರು.

- Advertisement -
spot_img

Latest News

error: Content is protected !!