Monday, June 8, 2026
Homeಕರಾವಳಿಮಂಗಳೂರುಮಂಗಳೂರು:  ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

ಮಂಗಳೂರು:  ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರು:  ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿ ನಡೆದಿದೆ. ಮೃತರನ್ನು ಕುಂಪಲ ನಿವಾಸಿ ದಯಾನಂದ (60) ಮೃತರು.

ದಯಾನಂದ ಅವರ ಮೃತದೇಹ ರಕ್ತಸಿಕ್ತವಾಗಿ ಪತ್ತೆಯಾಗಿದ್ದು. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೋ ಪ್ರಾಣಿ ದಾಳಿಯಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯ ಮಾಹಿತಿ ಪ್ರಕಾರ ಮುಂಜಾನೆ ವೇಳೆ ನಾಯಿ ದಾಳಿ ಮಾಡಿರುವ ಸಾಧ್ಯತೆ ಇದ್ದು, ದೇಹದ ಮೇಲೆ ಕಡಿದ ರೀತಿಯ ಗಾಯಗಳು ಅಷ್ಟೊಂದು ತೀವ್ರವಾಗಿತ್ತು. ವ್ಯಕ್ತಿ ಕಣ್ಣು ಸೇರಿ ದೇಹ ಭಾಗಗಳು ಚೆಲ್ಲಾಪಿಲ್ಲಿಯಾಗಿದ್ದವು. ಸ್ಥಳಕ್ಕೆ ಆಗಮಿಸಿದ ವಿಧಿ ವಿಜ್ಞಾನ ತಜ್ಞರು ಇದೊಂದು ಪ್ರಾಣಿ ದಾಳಿ ಎಂದು ಸೂಚಿಸಿದರು. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!