Saturday, June 6, 2026
Homeಕರಾವಳಿಮಂಗಳೂರು ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.36 ಕೋಟಿ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.36 ಕೋಟಿ ಮೌಲ್ಯದ ಚಿನ್ನಾಭರಣ ವಶ

- Advertisement -
- Advertisement -

ಮಂಗಳೂರು : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು  ವಶ ಪಡಿಸಿಕೊಂಡಿದ್ದಾರೆ.

ಒಂದು ಪ್ರಕರಣದಲ್ಲಿ ಓರ್ವ ಪ್ರಯಾಣಿಕನಿಂದ 49.74 ಲ.ರೂ. ಮೌಲ್ಯದ 964 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಮಹಿಳೆಯಿಂದ 86,89,440 ರೂ. ಮೌಲ್ಯದ 1.684 ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈಕೆ ಒಳವಸ್ತ್ರ ಮಾದರಿಯ ಬಟ್ಟೆಯಲ್ಲಿ ಹಾಗೂ ಸ್ಯಾನಿಟರಿ ಪ್ಯಾಡ್ ನಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದಳು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!