Tuesday, July 1, 2025
Homeಚಿಕ್ಕಮಗಳೂರುಚಾರಣಪ್ರಿಯರಿಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ; ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್

ಚಾರಣಪ್ರಿಯರಿಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ; ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್

spot_img
- Advertisement -
- Advertisement -

ಚಿಕ್ಕಮಗಳೂರು; ಚಾರಣಪ್ರಿಯರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಚಾರಣ ತಾಣ ಎತ್ತಿನಭುಜಕ್ಕೆ ಪ್ರವೇಶ 1 ತಿಂಗಳುಗಳ ಕಾಲ ಪ್ರವೇಶ ನಿಷೇಧಿಸಲಾಗಿದೆ. ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಪ್ರವಾಸಿಗರ ಹಿತದೃಷ್ಟಿಯಿಂದಾಗಿ ಚಾರಣಕ್ಕೆ ನಿಷೇಧ ಹೇರಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಪ್ರವಾಸಿಗರು 7 ಕಿ.ಮೀ. ಚಾರಣ ಹೋಗಿ ಎತ್ತಿನಭುಜದ ಸೌಂದರ್ಯ ಸವಿಯುತ್ತಿದ್ದರು. ಚಾರಣ ಮಾಡುವ ವೇಳೆ ಅನಾಹುತವಾದ್ರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯ. ಯಾವುದೇ ವಾಹನಗಳು ಹೋಗುವುದಿಲ್ಲ ಹೊತ್ತೇ ತರಬೇಕು.ಜೊತೆಗೆ  ಕಾಡುಪ್ರಾಣಿಗಳ ಕಾಟ, ಮಳೆ, ಜಾರುವ ಪ್ರದೇಶದವಾದ್ದರಿಂದ ಚಾರಣಕ್ಕೆ ನಿಷೇಧ ಹೇರಲಾಗಿದೆ. ಇಂದಿನಿಂದ ಒಂದು ತಿಂಗಳ ಕಾಲ ಪ್ರವೇಶ ಸಂಪೂರ್ಣ ನಿಷೇಧವಾಗಿದೆ. ಚಾರಣವನ್ನ ಬಂದ್ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದರು. ಇನ್ನು ಎತ್ತಿನಭುಜದಲ್ಲಿ ಓರ್ವ ಕಾವಲುಗಾರನ ನೇಮಿಸಲು ಸೂಚನೆ ನೀಡಲಾಗಿದೆ.

- Advertisement -
spot_img

Latest News

error: Content is protected !!