Thursday, April 25, 2024
Homeಕರಾವಳಿಬೆಳ್ತಂಗಡಿ ತಾಲೂಕಿನ 28 ದೇವಸ್ಥಾನಗಳಿಗೆ ರಾಜ್ಯ ಸರ್ಕಾರದಿಂದ 10 ಕೋಟಿ ಅನುದಾನ ಘೋಷಣೆ: ಜನತೆಯ ಪರವಾಗಿ...

ಬೆಳ್ತಂಗಡಿ ತಾಲೂಕಿನ 28 ದೇವಸ್ಥಾನಗಳಿಗೆ ರಾಜ್ಯ ಸರ್ಕಾರದಿಂದ 10 ಕೋಟಿ ಅನುದಾನ ಘೋಷಣೆ: ಜನತೆಯ ಪರವಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಾಸಕ ಹರೀಶ್‌ ಪೂಂಜಾ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 28 ದೇವಸ್ಥಾನಗಳಿಗೆ ಕರ್ನಾಟಕ ಸರ್ಕಾರ 10 ಕೋಟಿ ಅನುದಾನ ನೀಡಿದ್ದು, ಶಾಸಕ ಹರೀಶ್‌ ಪೂಂಜಾ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ, ಧಾರ್ಮಿಕ ದತ್ತಿ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆಯವರಿಗೆ, ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್‌ರವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ರವರಿಗೆ ತಾಲೂಕಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ಸರಕಾರದ ಈ ಯೋಜನೆಯಿಂದ ಮೂಲಭೂತ ಸೌಕರ್ಯ ವೃದ್ಧಿಸಲು ನೆರವಾಗಲಿದೆ.  ನಾರಾವಿಯ ಶ್ರೀ ಸೂರ್ಯ ನಾರಾಯಣ ದೇವಸ್ಥಾನ, ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ, ಕೊರಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು, ಶ್ರೀ ಗೋಪಾಕೃಷ್ಣ ದೇವಸ್ಥಾನ ನಾವೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು, ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಕಲ್ಮಂಜ, ಶ್ರೀ ಸೂರ್ಯನಾರಾಯಣ ದೇವಸ್ಥಾನ ಹೊಸಂಗಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ಲಾಲು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಹತ್ಯಡ್ಕ ಇದರ ಅಭಿವೃದ್ಧಿ ಕಾರ್ಯಗಳಿಗೆ ತಲಾ ರೂ.50.00 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.

ಒಟ್ಟು ಹನ್ನೆರಡು ದೇಗುಲಗಳಿಗೆ ತಲಾ 50 ಲಕ್ಷ ಹಾಗೂ 16 ದೇಗುಲಗಳಿಗೆ ತಲಾ 25 ಲಕ್ಷ ಅನುದಾನ ನೀಡಲಾಗಿದೆ.

- Advertisement -
spot_img

Latest News

error: Content is protected !!