Thursday, May 9, 2024
Homeಅಪರಾಧಮಹಾರಾಷ್ಟ್ರದ ಅಹ್ಮದ್​​ನಗರ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ; 10 ಮಂದಿ ಸಾವು

ಮಹಾರಾಷ್ಟ್ರದ ಅಹ್ಮದ್​​ನಗರ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ; 10 ಮಂದಿ ಸಾವು

spot_img
- Advertisement -
- Advertisement -

ನವದೆಹಲಿ: ಮಹಾರಾಷ್ಟ್ರದ ಅಹಮದ್‌ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

ಐಸಿಯು ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ. ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಈ ವಾರ್ಡ್​ನಲ್ಲಿ ಒಟ್ಟು 17 ರೋಗಿಗಳು ದಾಖಲಾಗಿದ್ದರು ಎಂದು ಹೇಳಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಮತ್ತೊಂದು ಕೋವಿಡ್​ ವಾರ್ಡ್​ಗೆ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಬೋಸ್ಲೆ ತಿಳಿಸಿದ್ದಾರೆ. ಕೋವಿಡ್ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಕಾರಣ ಇನ್ನು ಪತ್ತೆ ಆಗಿಲ್ಲ. ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ನವಾಬ್​ ಮಲಿಕ್​, ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದಾಗಿ ಹೊಸದಾಗಿ ಐಸಿಯು ನಿರ್ಮಾಣ ಮಾಡಲಾಗಿತ್ತು. ಈ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಗಂಭೀರ ಸಮಸ್ಯೆ ಸೃಷ್ಟಿಸಿದೆ ಎಂದಿದ್ದಾರೆ. ಎಲ್ಲಾ ಆಸ್ಪತ್ರೆಗಳಲ್ಲಿ ಫೈರ್​ ಆಡಿಟ್​ ಕೈಗೊಳ್ಳಲು ಸೂಚಿಸಲಾಗಿದೆ. ಈ ಸಂಬಂಧ ಅಹ್ಮದ್‌ನಗರ ಸಿವಿಲ್ ಆಸ್ಪತ್ರೆಯ ವರದಿಯನ್ನು ಪರಿಶೀಲಿಸಲಾಗುವುದು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಮಲಿಕ್ ಹೇಳಿದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಅವರಿಗೆ ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ಸಚಿವರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!