Friday, June 5, 2026
Homeತಾಜಾ ಸುದ್ದಿಭೀಕರ ರಸ್ತೆ ಅಪಘಾತ 10 ಮಂದಿ ಸಾವು- ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಭೀಕರ ರಸ್ತೆ ಅಪಘಾತ 10 ಮಂದಿ ಸಾವು- ಸಂತಾಪ ಸೂಚಿಸಿದ ಪ್ರಧಾನಿ ಮೋದಿ

- Advertisement -
- Advertisement -

ಚಿತೋರ್ ಘಡ್:ರಾಜಸ್ಥಾನದ ಚಿತೋರ್ ಘಡದ ನಿಕುಂಬ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 10 ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿದ್ದಾರೆ.ಜೀಪ್ ಮತ್ತು ಟ್ರಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಜೀಪ್ ನಲ್ಲಿದ್ದವರ ಪೈಕಿ ಕನಿಷ್ಟ 10 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತ ತೀವ್ರ ತೆರನಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಜೀಪ್ ನಲ್ಲಿದ್ದವರು ಮಧ್ಯ ಪ್ರದೇಶದ ರತ್ಲಮ್ ಜಿಲ್ಲೆಯ ನಿವಾಸಿಗಳಾಗಿದ್ದು 16 ಮಂದಿ ಪ್ರಯಾಣಿಸುತ್ತಿದ್ದರು.ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಿಕುಂಬ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಈ ಅಪಘಾತಕ್ಕೆ ಸಂಭಂದಿಸಿ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಸಂತ್ರಸ್ಥರ ಕುಟುಂಬಕ್ಕೆ ಸಂತಾಪ ಸೂಚಿಸಿ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

- Advertisement -

Latest News

error: Content is protected !!