Friday, June 26, 2026
Homeಮಹಾನ್ಯೂಸ್ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಭೀಕರ ರೈಲು ದುರಂತ; 1 ಸುಳ್ಳಿಗೆ 10 ಮಂದಿ ಬಲಿ

ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಭೀಕರ ರೈಲು ದುರಂತ; 1 ಸುಳ್ಳಿಗೆ 10 ಮಂದಿ ಬಲಿ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು 10 ಮಂದಿ ಸಾವನ್ನಪ್ಪಿದ್ದಾರೆ. ಜಲಗಾಂವ್‌ನ ಪಚೋರಾ ಪಟ್ಟಣದ ಪರಂಡ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ.

ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುಳ್ಳು ವದಂತಿ ನಂಬಿ ರೈಲಿನಲ್ಲಿದ್ದ ಪ್ರಯಾಣಿಕರು ರೈಲಿನಿಂದ ಪಕ್ಕದಲ್ಲಿದ್ದ ಹಳಿಗೆ ಹಾರಿದ್ದಾರೆ. ಆಗ ಅದೇ ಹಳಿಯಲ್ಲಿ ಬಂದ ಕರ್ನಾಟಕ ಎಕ್ಸ್ ಪ್ರೆಸ್ ಅವರ ಮೇಲೆ ಹರಿದಿದೆ. ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

- Advertisement -

Latest News

error: Content is protected !!