ಬಂಟ್ವಾಳ: ಕೋವಿಡ್ – 19 (ಕೊರೋನ) ವೈರಸ್ ಸೋಂಕು ದೃಢಪಟ್ಟು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಜಿಪನಡು ಗ್ರಾಮದ 10 ತಿಂಗಳ ಮಗು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಗ್ರಾಮದ ಹತ್ತು ತಿಂಗಳ ಗಂಡು ಮಗುವನ್ನು ಮಾರ್ಚ್ 23ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರನೆ ದಿನ ಮಗುವಿನ ಗಂಟಲ ಸ್ರಾವವನ್ನು ಕೋವಿಡ್ – 19 ಪರೀಕ್ಷೆಗೆ ಕಳುಹಿಸಿದ್ದು ಮಾರ್ಚ್ 26ರಂದು ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಸೋಂಕು ದೃಢಪಟ್ಟಿದ್ದರೂ ಮಗುವಿನ ಆರೋಗ್ಯ ಸಂಪೂರ್ಣ ಸ್ಥಿರವಾಗಿತ್ತು. ಇಂದು ಸಂಜೆ ಮಗು ಹಾಗೂ ಮಗುವಿನೊಂದಿಗೆ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಮಗುವಿನ ತಾಯಿ, ಅಜ್ಜಿ ಬಿಡುಗಡೆಗೊಂಡಿದ್ದಾರೆ. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಮಗುವಿನ ತಂದೆ, ಅಜ್ಜ, ಚಿಕ್ಕಪ್ಪ ಕೆಲವು ದಿನಗಳ ಹಿಂದೆಯೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.
ಮಗುವಿಗೆ ಸೋಂಕು ದೃಢಪಟ್ಟ ಬಳಿಕ ಮಗುವಿನ ತಂದೆ, ತಾಯಿ, ಅಜ್ಜ, ಅಜ್ಜಿ, ಚಿಕ್ಕಪ್ಪ ಸಹಿತ ಮಗು ಇದ್ದ ಮನೆಯ ನೆರೆಮನೆಯವರ ಗಂಟಲ ಸ್ರಾವವನ್ನು ಪರೀಕ್ಷೆಗೆ ಕಳುಹಿಸಿದ್ದು ಎಲ್ಲರದ್ದೂ ನೆಗೆಟಿವ್ ವರದಿ ಬಂದಿತ್ತು.
ಸಜಿಪನಡು ಗ್ರಾಮದ 10 ತಿಂಗಳ ಮಗು ಆಸ್ಪತ್ರೆಯಿಂದ ಬಿಡುಗಡೆ
- Advertisement -
- Advertisement -
- Advertisement -