Wednesday, June 3, 2026
HomeUncategorizedಉಡುಪಿ : ಸರ್ಕಾರಿ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಉಡುಪಿ : ಸರ್ಕಾರಿ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಉಡುಪಿ : ಸರ್ಕಾರಿ ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.

ಹಿರಿಯಡ್ಕದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸುವೀಕ್ಷಾ ಶೆಟ್ಟಿ ಮೃತ ದುರ್ದೈವಿ.

ಹಿರಿಯಡ್ಕ ನಿವಾಸಿ ನಯನಾ ಶೆಟ್ಟಿ ಅವರ ಏಕೈಕ ಪುತ್ರಿಯಾಗಿರುವ ಸುವೀಕ್ಷಾ ಫೆಬ್ರವರಿ 26ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಕುಟುಂಬದವರು ನೇಣು ಕತ್ತರಿಸಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದರು.

ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಚಿಕಿತ್ಸೆ ಫಲಿಸದೇ ಇಂದು ಸುವೀಕ್ಷಾ ಶೆಟ್ಟಿ ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!