Tuesday, April 23, 2024
Homeತಾಜಾ ಸುದ್ದಿಬರೋಬ್ಬರಿ 10 ಬಾರಿ ಕೊರೊನಾ ಟೆಸ್ಟ್ ಮಾಡಿಸಿದ್ದಾರಂತೆ ರೇಣುಕಾಚಾರ್ಯ: ದಯವಿಟ್ಟು ಕೋವಿಡ್ ನಿರ್ಲಕ್ಷಿಸಬೇಡಿ ಎಂದು ಮನವಿ...

ಬರೋಬ್ಬರಿ 10 ಬಾರಿ ಕೊರೊನಾ ಟೆಸ್ಟ್ ಮಾಡಿಸಿದ್ದಾರಂತೆ ರೇಣುಕಾಚಾರ್ಯ: ದಯವಿಟ್ಟು ಕೋವಿಡ್ ನಿರ್ಲಕ್ಷಿಸಬೇಡಿ ಎಂದು ಮನವಿ ಮಾಡಿದ ಶಾಸಕ

spot_img
- Advertisement -
- Advertisement -

ಬೆಂಗಳೂರು ಕೊರೊನಾ ಅನ್ನೋ ಹೆಮ್ಮಾರಿ ಹೇಗೆಲ್ಲಾ ಆಟ ಆಡಿಸ್ತಿದೆ ಅನ್ನೋದು ಗೊತ್ತೇ ಇದೆ. ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಮ್ಮ ಕೊರೊನಾ ಅನುಭವದ ಬಗ್ಗೆ ಹೇಳಿದ್ದಾರೆ.

ದೇಶದಲ್ಲಿ, ರಾಜ್ಯದಲ್ಲಿ ಕೊರೊನಾ ದಿನೇ ದಿನೇ ಹೆಚ್ಚಳ ಆಗ್ತಿದೆ. ನಾನು 9 ಬಾರಿ ಪರೀಕ್ಷೆ ಮಾಡಿಸಿಕೊಂಡಾಗ ನೆಗೆಟಿವ್ ಬಂದಿತ್ತು. ಆದರೆ 10ನೇ ಬಾರಿಯ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂತು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಇಂದು ಮಾತನಾಡಿದ ಅವರು ನಾನು ಅಧಿವೇಶನದಲ್ಲಿ ಪಾಲ್ಗೊಂಡಾಗ ನನಗೆ ಪಾಸಿಟೀವ್ ಬಂದಿದೆ ಅನ್ನಿಸುತ್ತಿದೆ. ನನ್ನ ಕ್ಷೇತ್ರದಲ್ಲಿ ಇದ್ದಾಗ ನನಗೆ ಕೊರೊನಾ ಬಂದಿರಲಿಲ್ಲ. ಕೊರೊನಾ ನನಗೆ ಪಾಠ ಕಲಿಸಿತು. ಸರಿಯಾಗಿ ಊಟ, ನಿದ್ರೆ ಮಾಡ್ತಿರಲಿಲ್ಲ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದೆ. ನಾನು ಮನೆಯವರಿಂದ ದೂರ ಇದ್ದೆ. ಸಂಪೂರ್ಣವಾಗಿ ಪ್ರತ್ಯೇಕವಾಗಿ ಇದ್ದೆ. ನನ್ನ ರೂಂ ನಾನೇ ಕ್ಲೀನ್ ಮಾಡಿಕೊಳ್ಳುತ್ತಿದ್ದೆ. ಬಟ್ಟೆ ನಾನೇ ತೊಳೆದುಕೊಳ್ಳುತ್ತಿದ್ದೆ. ತಟ್ಟೆ, ಲೋಟ ಇಟ್ಟುಕೊಂಡು ಜೀವನ ಮಾಡಿದ್ದೇನೆ. ಇನ್ನೂ ಆಯಾಸ ಇದೆ. ಆದರೂ ಜನರು ಜಾಗೃತವಾಗಿ ಇರಲಿ ಅಂತ ನಾನು ಸುದ್ದಿಗೋಷ್ಟಿ ಮಾಡಿದೆ ಎಂದು ಹೇಳಿದ್ದಾರೆ. ಹಾಗೇ ಎಲ್ಲರೂ ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!