Thursday, May 16, 2024
Homeಅಪರಾಧಐಸ್ ಕ್ರೀಂ ಕೊಡಿಸುವ ಆಮೀಷವೊಡ್ಡಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 10 ವರ್ಷ...

ಐಸ್ ಕ್ರೀಂ ಕೊಡಿಸುವ ಆಮೀಷವೊಡ್ಡಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ!

spot_img
- Advertisement -
- Advertisement -

ಪುತ್ತೂರು : 2015ರಲ್ಲಿ ಸುಳ್ಯ ತಾಲೂಕಿನ ಜಾಲ್ಲೂರಿನಲ್ಲಿ ಆರು ವರ್ಷದ ಬಾಲಕಿಗೆ ಐಸ್ ಕ್ರೀಂ ಕೊಡಿಸುವ ಆಮೀಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆಯನ್ನು ತನ್ನ ತೀರ್ಪಿನಲ್ಲಿ ಪ್ರಕಟಿಸಿದೆ.

ಜಾಲ್ಲೂರು ನಿವಾಸಿ ಸತೀಶ್ ಅಪರಾಧಿ. ನ್ಯಾಯಾಲಯವು ಈತನಿಗೆ 10 ವರ್ಷಗಳ ಕಾರಗೃಹ ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಕಠಿನ ಜೈಲು ಶಿಕ್ಷೆ ವಿಧಿಸುವಂತೆ ತೀರ್ಪು ಘೋಷಿಸಿದೆ.

2015 ರ ಡಿ.20ರಂದು ಸತೀಶನೂ ಮಧ್ಯಾಹ್ನ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಚಾಕೋಲೇಟ್ ಮತ್ತು ಐಸ್ಕ್ರೀಮ್ ಕೊಡುವ ಆಮಿಷವೊಡ್ಡಿ ಮನೆಯೊಳಗೆ ಕರೆದು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತು ಬಾಲಕಿಯ ತಾಯಿ ದೂರು ನೀಡಿದ್ದು ಸುಳ್ಯ ಠಾಣೆಯಲ್ಲಿ ಆರೋಪಿಯ ವಿರುದ್ಧ ಐಪಿಸಿ ಕಲಂ 376 ಮತ್ತು ಪೋಕ್ಸೋ ಕಾಯ್ದೆ ಕಲಂ 4, 6, 8,10 ರಡಿ ಪ್ರಕರಣ ದಾಖಲಿಸಿದ್ದರು.

ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಸ್ಪಿರೇರಾ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದರು.


ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ವೈದ್ಯೆ ಡಾ. ಶುಲ್ ಸುವರಿಸ್ ವಿಡಿಯೋ ಕಾನ್ನರೆನ್ಸ್ ಮೂಲಕ ಹಾಗೂ ಪ್ರಕರಣದ ತನಿಖಾಧಿಕಾರಿಗಳಾದ ಚಂದ್ರಶೇಖರ ಹೆಚ್.ವಿ. ಮತ್ತು ಆಗಿನ ವೃತ್ತ ನಿರೀಕ್ಷಕರಾಗಿದ್ದ ಬಿ.ಎಸ್, ಸತೀಶ್ ರವರು ನ್ಯಾಯಾಲಯಕ್ಕೆ ಹಾಜರಾಗಿ ವಿವರವಾದ ಸಾಕ್ಷಿ ನುಡಿದಿದ್ದರು.

ದಂಡದ ಮೊತ್ತದಲ್ಲಿ ರೂ. 20 ಸಾವಿರವನ್ನು ಸಂತೃಪ್ತ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಲು ನ್ಯಾಯಾಲಯ ಆದೇಶಿಸಿದ್ದು, ದ.ಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ದಂ.ಪ.ಸಂ. ಕಲಂ 357(A) ರಡಿ ರೂ. ಒಂದು ಲಕ್ಷ ರೂಪಾಯಿಯನ್ನು ಸಂತೃಸ್ತೆಗೆ ನೀಡಬೇಕೆಂದು ನ್ಯಾಯಾಲಯವು ಆದೇಶಿಸಿದೆ.

ಸರ್ಕಾರದ ಪರವಾಗಿ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಕುದ್ರಿಯ ಪುಷ್ಪರಾಜ ಅಡ್ಯಂತಾಯರವರು ವಾದಿಸಿದ್ದರು.

- Advertisement -
spot_img

Latest News

error: Content is protected !!