ಬೆಂಗಳೂರು : ಲಾಕ್‍ಡೌನ್ ವೇಳೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದ ಮನೋವೈದ್ಯರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿದೆ. ಕೆಲಗಂಟೆಗಳವರೆಗಾದರೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವಂತೆ ಕೋರಿ ಮನೋವೈದ್ಯರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್ ) ಸಲ್ಲಿಸಿದ್ದರು.
ಮಂಗಳವಾರ ಅರ್ಜಿ ಕೈಗೆತ್ತಿಕೊಂಡ ಮುಖ್ಯ ನ್ಯಾ. ಎ.ಎಸ್.ಒಕಾ, ನ್ಯಾ.ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವೈದ್ಯರ ಅರ್ಜಿಯನ್ನು ವಜಾ ಮಾಡಿ 10 ಸಾವಿರ ರೂ ದಂಡ ವಿಧಿಸಿದೆ. ಹುಬ್ಬಳ್ಳಿಯ ಖ್ಯಾ ಮನೋವೈದ್ಯರಾದ ವಿನೋದ್ ಕುಲಕರ್ಣಿ ಲಾಕ್‍ಡೌನ್ ಹೇರಲಾಗಿರುವ ಸಮಯದಲ್ಲಿ ದೇಶಾದ್ಯಂತ ಮದ್ಯ ಮಾರಾಟ ನಿಷೇಧವಿದ್ದು ಕರ್ನಾಟಕದಲ್ಲಿ ಈ ನಿಷೇಧವನ್ನು ತೆರವು ಮಾಡಬೇಕೆಂದು ಪಿಐಎಲ್ ಮೂಲಕ ಮನವಿ ಸಲ್ಲಿಸಿದರು.
ಇಂತಹಾ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜನರ ಆಗಾರ, ಆರೋಗ್ಯಗಳ ಬಗೆಗೆ ಕಾಳಜಿ ವಹಿಸಿಕೊಳ್ಳಬೇಕು. ಅಂತಹುದರಲ್ಲಿ ವೈದ್ಯರಾಗಿ ಮದ್ಯಪಾನಿಗಳ ಪರ ಅರ್ಜಿ ಸಲ್ಲಿಸಿದು ಸರಿಯಲ್ಲ ಎಂದು ನ್ಯಾಯಪೀಠ ಅಸಮಾಧ ಹೊರಹಾಕಿದೆ.
ಆಹಾರ, ಚಿಕಿತ್ಸೆ ಇತ್ಯಾದಿಗಳ ಬಗ್ಗೆ ಆದ್ಯತೆ ನೀಡಬೇಕು ಎಂದಿದೆ. ಅಲ್ಲದೇ, ವೈದ್ಯರಾಗಿ ಮದ್ಯದ ಬಗ್ಗೆ ಕಾಳಜಿ ತೋರಿದ್ದಕ್ಕೆ ಅಸಮಾಧಾನ ಹೊರಹಾಕಿ ಹುಬ್ಬಳ್ಳಿಯ ಮನೋವೈದ್ಯ ಡಾ. ವಿನೋದ್ ಕುಲಕರ್ಣಿಯವರ ಪಿಐಎಲ್ನ್ನು ಕೋರ್ಟ್ ವಜಾ ಮಾಡಿದೆ.
ಮದ್ಯ ನಿಷೇಧದಿಂದಾಗಿ ಮದ್ಯಪಾನ ಮಾಡುವವರು ಖಿನ್ನತೆಗೆ ಜಾರುತ್ತಿದ್ದಾರೆ. ಇದರಿಂದ ಆತ್ಮಹತ್ಯೆ ಹೆಚ್ಚಾಗುತ್ತದೆ. ಖಿನ್ನತೆಗೆ ಜಾರುವುದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು