- Advertisement -
- Advertisement -
ಮಂಗಳೂರು: ಲೋಕಸಭಾ ಚುನಾವಣಾ ಪೂರ್ವದಲ್ಲಿ ಚುನಾವಣಾ ವರ್ಗಾವಣಾ ಮಾರ್ಗಸೂಚಿಯಂತೆ ವರ್ಗಾವಣೆಗೊಂಡಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳಿಗೆ ಮರು ವರ್ಗಾವಣೆ ಮಾಡಲಾಗಿದೆ.
ಪಶ್ಚಿಮ ವಲಯ ಮತ್ತು ಮಂಗಳೂರು ನಗರ ಘಟಕದ ಒಟ್ಟು 104 ಪಿಎಸ್ಐ ಗಳನ್ನು ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಚುನಾವಣಾ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆಯಲ್ಲಿ ಈ ಪುನರ್ ವರ್ಗಾವಣೆ ಮಾಡಲಾಗಿದ್ದು, ಪಶ್ಚಿಮ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ವರ್ಗಾವಣೆ ಆದೇಶ ಪಡೆದಿರುವ ಪಿಎಸ್ ಐಗಳು ತಕ್ಷಣವೇ ಸೂಚಿಸಿರುವ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
- Advertisement -