Thursday, May 16, 2024
Homeಇತರ10 ನೇ ತರಗತಿ ವಾರ್ಷಿಕ ಪರೀಕ್ಷೆ ರದ್ದು : ಸರ್ಕಾರದಿಂದ ಮಹತ್ವದ ಆದೇಶ

10 ನೇ ತರಗತಿ ವಾರ್ಷಿಕ ಪರೀಕ್ಷೆ ರದ್ದು : ಸರ್ಕಾರದಿಂದ ಮಹತ್ವದ ಆದೇಶ

spot_img
- Advertisement -
- Advertisement -

ಚಂಡೀಗಢ : ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ 10 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ಪಂಜಾಬ್ ಸರ್ಕಾರ ನಿರ್ಧರಿಸಿದೆ.

ಹೌದು, ಶಾಲೆಯಲ್ಲಿ ಈ ಹಿಂದೆ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಿ ಮುಂದಿನ ತರಗತಿಗಳಿಗೆ ಕಳಿಸುವಂತೆ ಪಂಜಾಬ್ ಸರ್ಕಾರ ತೀರ್ಮಾನಿಸಿದೆ. ಈಗಾಗಲೇ 1 ರಿಂದ 9 ನೇ ತರಗತಿವರೆಗಿನ ಎಲ್ಲ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ.

ಇದೀಗ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ 10 ನೇ ತರಗತಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಬರೆಯುವ ಅವಶ್ಯಕತೆ ಇಲ್ಲ. ಶಾಲೆಗಳಲ್ಲಿ ಬರೆದ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗಳಿಗೆ ಪಾಸ್ ಮಾಡಲು ಪಂಜಾಬ್ ಸರ್ಕಾರ ನಿರ್ಧರಿಸಿದೆ.

- Advertisement -
spot_img

Latest News

error: Content is protected !!