Wednesday, June 24, 2026
Homeಅಪರಾಧಕುರಾನ್ ಅಭ್ಯಾಸಕ್ಕೆಂದು ಹೋಗಿದ್ದ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಕುರಾನ್ ಅಭ್ಯಾಸಕ್ಕೆಂದು ಹೋಗಿದ್ದ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಕುರಾನ್ ಅಭ್ಯಾಸಕ್ಕೆಂದು ಮನೆಯಿಂದ ಹೊರಹೋಗಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಕೊಲೆಗೈದಿರುವ ಅತ್ಯಂತ ಅಮಾನುಷ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ 7:15ರ ಸುಮಾರಿಗೆ ಬಾಲಕಿಯ ಮನೆಯಿಂದ ಕೇವಲ 200 ಮೀಟರ್ ದೂರದಲ್ಲೇ ಆಕೆಯ ಮೃತದೇಹ ಪತ್ತೆಯಾಗಿದ್ದು, ಬಳಿಕ ನಡೆಸಿದ ವೈದ್ಯಕೀಯ ಪರೀಕ್ಷೆ ಹಾಗೂ ಪ್ರಾಥಮಿಕ ತನಿಖೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಈ ದಾರುಣ ಘಟನೆಯು ಜಮ್ಮುವಿನಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಸ್ಥಳೀಯರು ತೀವ್ರವಾಗಿ ಆಗ್ರಹಿಸುತ್ತಿದ್ದಾರೆ.

ಸದ್ಯ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದ್ದು, ಅತ್ಯಂತ ಪಾರದರ್ಶಕವಾಗಿ ತನಿಖೆ ನಡೆಸಲಾಗುವುದು ಎಂದು ಬುದ್ಗಾಮ್‌ನ ಎಸ್‌ಪಿ ಹರಿಪ್ರಸಾದ್ ತಿಳಿಸಿದ್ದಾರೆ. ಈ ನಡುವೆ ಶಿಕ್ಷಣ ಸಚಿವೆ ಸಕೀನಾ ಯಾಟೂ ಸೇರಿದಂತೆ ಹಲವು ಪ್ರಮುಖ ನಾಯಕರು ಸಂತ್ರಸ್ತ ಬಾಲಕಿಯ ಕುಟುಂಬವನ್ನು ಸಂಪರ್ಕಿಸಿ ಸಾಂತ್ವನ ಹೇಳಿದ್ದು, ಮೃತಳ ಸಾವಿಗೆ ಸೂಕ್ತ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!