Thursday, May 2, 2024
Homeತಾಜಾ ಸುದ್ದಿಬಂಟ್ವಾಳ: ರೋಟರಿ ಕ್ಲಬ್ ವತಿಯಿಂದ ಸರಕಾರಿ ಪಾಲಿಟೆಕ್ನಿಕ್ ಗೆ 125 ಕಂಪ್ಯೂಟರ್ ಹಸ್ತಾಂತರ

ಬಂಟ್ವಾಳ: ರೋಟರಿ ಕ್ಲಬ್ ವತಿಯಿಂದ ಸರಕಾರಿ ಪಾಲಿಟೆಕ್ನಿಕ್ ಗೆ 125 ಕಂಪ್ಯೂಟರ್ ಹಸ್ತಾಂತರ

spot_img
- Advertisement -
- Advertisement -

ಬಂಟ್ವಾಳ: ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್, ರೋಟರಿ ಕ್ಲಬ್ ಉಪ್ಪಿನಂಗಡಿ ಆಶ್ರಯದಲ್ಲಿ ಇನ್ಫೋಸಿಸ್ ಸಂಸ್ಥೆ ವತಿಯಿಂದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಸರಕಾರಿ ಪಾಲಿಟೆಕ್ನಿಕ್ ಗೆ 125 ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಬಂಟ್ವಾಳದ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಸ್ತಾಂತರ ಕಾರ್ಯಕ್ರಮ ನೆರವೇರಿಸಿದರು. ಹಾಗೂ ಪ್ರಾಸ್ತಾವಿಕವಾಗಿ ಪಾಲಿಟೆಕ್ನಿಕ್ ಉಪನ್ಯಾಸಕ ನೆರವೇರಿಸಿದರು. ಕಾಲೇಜಿನ ಮುಖೋಪಾದ್ಯಾಯಿನಿ ಉಷಾ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ರೋಟರಿ ವಲಯ ನಾಲ್ಕರ ಅಸಿಸ್ಟೆಂಟ್ ಗವರ್ನರ್ ಸುರೇಂದ್ರ ಕಿಣಿ, ವಲಯ ಕಾರ್ಯದರ್ಶಿ ಜಯರಾಮ ರೈ, ರೋಟರಿ ಸಿಟಿ ಜಿಎಸ್.ಆರ್ ಪದ್ಮನಾಭ ರೈ, ರೋಟರಿ ಲೊರೆಟ್ಟೊ ಸ್ಥಾಪಕಾಧ್ಯಕ್ಷ ಅವಿಲ್ ಮೆನೇಜಸ್, ರೋಟರಿ ಕ್ಲಬ್ ಲೊರೆಟ್ಟೊ ಅಧ್ಯಕ್ಷ ರಾಘವೇಂದ್ರ ಭಟ್, ಉಪ್ಪಿನಂಗಡಿ ಕ್ಲಬ್ ಅಧ್ಯಕ್ಷ ನೀರಜ್ ಮತ್ತು ರಿಜಿಸ್ಟ್ರಾರ್ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಅಧ್ಯಕ್ಷ ಸತೀಶ್ ಕುಮಾರ್ ಸ್ವಾಗತಿಸಿದರು. ರೋಟರಿ ಕ್ಲಬ್ ಲೊರೆಟ್ಟೊ ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ ಕಾರ್ಯಕ್ರಮ ನಿರ್ವಹಿಸಿದರು.

- Advertisement -
spot_img

Latest News

error: Content is protected !!