ಮಂಗಳೂರು : 13 ವರ್ಷದ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ ಎಂಬಲ್ಲಿ ನಡೆದಿದೆ.
ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದಾರೆ. 4 ದಿನಗಳ ಹಿಂದೆ ಅವರ ತಮ್ಮನ ಮಗಳಾದ 13 ವರ್ಷದ ಬಾಲಕಿ ಕೈ ನೋವಿನ ಚಿಕಿತ್ಸೆಗೆ ಅಂತಾ ಬಂದು ಅವರ ಮನೆಯಲ್ಲೇ ಉಳಿದುಕೊಂಡಿದ್ದಳು . ಮಂಗಳವಾರ ಹನುಮಂತ ಅವರ ಮನೆಯವರೆಲ್ಲಾ ಕೆಲಸಕ್ಕೆ ಹೋಗಿದ್ದರು. ಬೆಳಿಗ್ಗೆ ಸರಿ ಸುಮಾರು 10.30 ಗಂಟೆಗೆ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ಹೇಳಿದ್ದಾರೆ.
ಪಕ್ಕದ ಮನೆಯವರು ಪೋನ್ ಕೊಡಲು ಹನುಮಂತ ಅವರ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಪತ್ತೆಯಾಗಿದ್ದಾಳು. ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ವಿಷಯ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತನಿಗೆ ಪೋನ್ ಮೂಲಕ ಮನೆಗೆ ಹೋಗುವಂತೆ ತಿಳಿಸಿದ್ದಾರೆ. ಹನುಮಂತ ಅವರು ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಡಿಸಿಪಿ ದಿನೇಶ್ ಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದ್ದು , ಪಣಂಬೂರು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿ ತನಿಖೆ ಆರಂಭಿಸಿದ್ದಾರೆ.