Saturday, June 6, 2026
Homeಕರಾವಳಿಮಂಗಳೂರು: ಫಾಜಿಲ್ ಕೊಲೆ‌ ಪ್ರಕರಣದ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ಫಾಜಿಲ್ ಕೊಲೆ‌ ಪ್ರಕರಣದ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

- Advertisement -
- Advertisement -

ಮಂಗಳೂರು :  ಫಾಜಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್ ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ ಕೊಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪವಿತ್ತು. ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಆಗಸ್ಟ್ 17ರಂದು ಬಂಧಿಸಿದ್ದರು.

ಪೊಲೀಸರು ಗುರುವಾರ ಆರೋಪಿ ಹರ್ಷಿತನನ್ನು ಎರಡನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಸುರತ್ಕಲ್ ನ ಮಾರುಕಟ್ಟೆಯ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಮತ್ತು ಕೃತ್ಯ ಎಸಗಲು ಕಾರು ನೀಡಿದ್ದ ಓರ್ವನನ್ನು ಬಂಧಿಸಿದ್ದರು.

- Advertisement -

Latest News

error: Content is protected !!