Friday, June 28, 2024
Homeತಾಜಾ ಸುದ್ದಿಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ 14 ದಿನಗಳ ನ್ಯಾಯಾಂಗ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯಗಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಬಂಧಿತ ಸೂರಜ್‌ ರೇವಣ್ಣ ಅವರನ್ನು ಇಂದು ರಾತ್ರಿ ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯಗಳ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಇದೇ ವೇಳೇ ನ್ಯಾಯಾಧೀಶರು ಸೂರಜ್‌ ರನ್ನು 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ. ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರ ಮುಂಜಾನೆವರೆಗೂ ಸಿಇಎನ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಿದೆ ಅಂತ ತಿಳಿದು ಬಂದಿದೆ.ಅಲ್ಲದೇ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.

- Advertisement -
spot_img

Latest News

error: Content is protected !!