- Advertisement -
- Advertisement -
ಶಿವಮೊಗ್ಗ: ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ 14 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ನಗರದ ವಾದಿ-ಏ-ಹುಧಾ ಪ್ರದೇಶದಲ್ಲಿ ನಡೆದಿದೆ.
ಮೃತ ಬಾಲಕನನ್ನು ಉಮರ್ ಫಾರುಕ್ ಎಂದು ಗುರುತಿಸಲಾಗಿದೆ. ಈತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದಾಗ ಏಕಾಏಕಿ ವಿದ್ಯುತ್ ಶಾಕ್ ತಗುಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.
ಕೂಡಲೇ ಕುಟುಂಬಸ್ಥರು ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಆದರೆ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಬಾಲಕನ ಅಕಾಲಿಕ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಕರು ಹಾಗೂ ಸಹಪಾಠಿಗಳು ಕೂಡ ಉಮರ್ ಫಾರುಕ್ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- Advertisement -


