Friday, June 26, 2026
Homeಕರಾವಳಿರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆ

- Advertisement -
- Advertisement -

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ರವಿವಾರ ನಡೆಯಿತು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಪಕ್ಷ ರಾಷ್ಟ್ರ ನಿರ್ಮಾಣದಲ್ಲಿ ನಿರ್ವಹಿಸಿದ ಪಾತ್ರ ಅನನ್ಯ. ಸ್ವಾತಂತ್ರ್ಯದ ಬಳಿಕ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಕಾಂಗ್ರೆಸ್ ಇಂದಿಗೂ ಬಡವರು, ಶೋಷಿತರು, ಅವಕಾಶ ವಂಚಿತರು ಸೇರಿದಂತೆ ದೇಶದ ನಾಗರಿಕರ ಧ್ವನಿಯಾಗಿದ್ದು, ಸಂವಿಧಾನ, ಪ್ರಜಾಪ್ರಭುತ್ವ ಆಶಯಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಭಾರತವನ್ನು ಮುಕ್ತಗೊಳಿಸಲು ಕಾಂಗ್ರೆಸ್ ಮಹನೀಯರ ತ್ಯಾಗ, ಬಲಿದಾನ ಸ್ಮರಣೀಯ ಎಂದು ಹೇಳಿದರು.

- Advertisement -

Latest News

error: Content is protected !!