Sunday, June 7, 2026
Homeಕರಾವಳಿಮಂಗಳೂರುಬಂಟ್ವಾಳದ ಇರಾಕೋಡಿಯಲ್ಲಿ ಯುವಕನ ಬರ್ಬರ ಹತ್ಯೆ; ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು...

ಬಂಟ್ವಾಳದ ಇರಾಕೋಡಿಯಲ್ಲಿ ಯುವಕನ ಬರ್ಬರ ಹತ್ಯೆ; ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

- Advertisement -
- Advertisement -

ಬಂಟ್ವಾಳದ ಇರಾಕೋಡಿಯಲ್ಲಿ ಯುವಕನ ಬರ್ಬರ ಹತ್ಯೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಹೀಂ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀವ್ರ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯದಲ್ಲಿ ನಿಷೇಧಾಜ್ಞೆ ಜಾರಿಗೆ ಪೊಲೀಸ್ ವರಿಷ್ಠಾಧಿಕಾರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು,ಈ ಹಿನ್ನಲೆ ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಹಾಗೂ ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ವರದಿಯನ್ನು ಆಧರಿಸಿ ಸದ್ರಿ ಘಟನೆಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಕಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

- Advertisement -

Latest News

error: Content is protected !!