Wednesday, May 1, 2024
Homeಕರಾವಳಿಮೇ 13 ರಂದು ದಕ್ಷಿಣಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

ಮೇ 13 ರಂದು ದಕ್ಷಿಣಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

spot_img
- Advertisement -
- Advertisement -

ಮಂಗಳೂರು; ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್‌ ಆರ್‌ ರವಿ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!