Monday, May 6, 2024
Homeಕರಾವಳಿಉಡುಪಿದಕ್ಷಿಣಕನ್ನಡದಲ್ಲಿಂದು 149 ಜನರಿಗೆ ಕೊರೊನಾ ಸೋಂಕು ದೃಢ, ಐವರು ಕೋವಿಡ್ ಗೆ ಬಲಿ, ಉಡುಪಿಯಲ್ಲಿ 84...

ದಕ್ಷಿಣಕನ್ನಡದಲ್ಲಿಂದು 149 ಜನರಿಗೆ ಕೊರೊನಾ ಸೋಂಕು ದೃಢ, ಐವರು ಕೋವಿಡ್ ಗೆ ಬಲಿ, ಉಡುಪಿಯಲ್ಲಿ 84 ಹೊಸ ಪ್ರಕರಣಗಳು ಪತ್ತೆ

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೆ ಮತ್ತೊಂದು ಕಡೆ ಕೋವಿಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇನ್ನು ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 149 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3829ಕ್ಕೆ ಏರಿಕೆಯಾಗಿದೆ. ಇನ್ನು ಇವತ್ತು ಐವರನ್ನು ಜಿಲ್ಲೆಯಲ್ಲಿ ಕೊರೊನಾ ಬಲಿ ಪಡೆದುಕೊಂಡಿದೆ.

ಅಂದ್ಹಾಗೆ ಸದ್ಯ ಜಿಲ್ಲೆಯಲ್ಲಿ 2574 ಸಕ್ರೀಯ ಕೊರೊನಾ ಪ್ರಕರಣಗಳಿದ್ದು, 1180 ಮಂದಿ ಇದುವರೆಗೂ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗೇ ಇಂದು 29 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 73 ಮಂದಿಯನ್ನು ಕೊರೊನಾ ಬಲಿ ಪಡೆದಿದೆ.

ಇನ್ನು ಉಡುಪಿಯಲ್ಲಿ ಇವತ್ತು 84 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 664 ಸಕ್ರೀಯ ಪ್ರಕರಣಗಳಿದ್ದು, 1731 ಮಂದಿ ಇದುವರೆಗೂ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

- Advertisement -
spot_img

Latest News

error: Content is protected !!