ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 15 ವರ್ಷ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ತೀರ್ಪು ಪ್ರಕಟವಾಗಲಿದ್ದು ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಅವರು, ಮೂರು ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಗೆ ಒಟ್ಟು 15 ವರ್ಷ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ. ಅಲ್ಲದೆ ಒಟ್ಟು 9 ಕೋಟಿ 60 ಲಕ್ಷ ದಂಡ ವಿಧಿಸಬೇಕು ಎಂದು ಆದೇಶಿಸಿದ್ದಾರೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಕುರಿತು ತೀರು ಪ್ರಕಟಿಸಿರುವ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಕಳ್ಳತನ ಪ್ರಕರಣದಲ್ಲಿ ಅಪರಾಧಗಳಿಗೆ 5 ವರ್ಷ ಅಲ್ಲದೆ ವಂಚನೆ ಪ್ರಕರಣದಲ್ಲಿ 7 ವರ್ಷ ಹಾಗೂ ಒಳಸಂಚು ಆರೋಪದಲ್ಲಿ 5 ವರ್ಷ ಶಿಕ್ಷೆ ಪ್ರಕಟಿಸಲಾಗಿದೆ.ಹಾಗಾಗಿ ಸತೀಶ್ ಸೈಲ್ ಅವರಿಗೆ ಜೈಲೇ ಗತಿ ಎನ್ನುವಂತಾಗಿದೆ.
ಕಳೆದ 2010 ರ ಜೂನ್ 2ರಲ್ಲಿ, ಅಂದರೆ ಕೇವಲ 80 ದಿನಗಳಲ್ಲಿ 6 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ನಾಪತ್ತೆಯಾಗಿತ್ತು. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ತನಿಖೆ ಆರಂಭಿಸಿತ್ತು. ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಕಾರಾಪುಡಿ ಮಹೇಶ್, ಸ್ವಸ್ತಿಕ್ ನಾಗರಾಜು ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿ ದಾಖಲಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ಪ್ರಕಟಿಸಲಾಗಿದೆ