Saturday, June 6, 2026
Homeಕರಾವಳಿಉಡುಪಿದಕ್ಷಿಣಕನ್ನಡದಲ್ಲಿಂದು 153 ಮಂದಿಗೆ ಕೋವಿಡ್ ಪಾಸಿಟಿವ್, 7 ಮಂದಿ ಸಾವು, ಉಡುಪಿಯಲ್ಲಿ 126 ಹೊಸ ಕೇಸುಗಳು

ದಕ್ಷಿಣಕನ್ನಡದಲ್ಲಿಂದು 153 ಮಂದಿಗೆ ಕೋವಿಡ್ ಪಾಸಿಟಿವ್, 7 ಮಂದಿ ಸಾವು, ಉಡುಪಿಯಲ್ಲಿ 126 ಹೊಸ ಕೇಸುಗಳು

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 153 ಹೊಸ ಕೊರೊನಾ ಕೇಸುಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 6,163ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಜಿಲ್ಲೆಯಲ್ಲಿ 7 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 3147 ಸಕ್ರೀಯ ಪ್ರಕರಣಗಳಿದ್ದು, 2,849 ಮಂದಿ ಗುಣಮುಖರಾಗಿದ್ದಾರೆ. ಇನ್ನು ಇಂದು 124 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೊನಾಗೆ ಜಿಲ್ಲೆಯಲ್ಲಿ 165 ಮಂದಿ ಬಲಿಯಾಗಿದ್ದಾರೆ.

ಇನ್ನು ಅತ್ತ ಉಡುಪಿಯಲ್ಲಿ ಇಂದು 126 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,799ಕ್ಕೆ ಏರಿಕೆಯಾಗಿದೆ. ಸದ್ಯ ಉಡುಪಿಯಲ್ಲಿ 2,035 ಸಕ್ರೀಯ ಪ್ರಕರಣಗಳಿದ್ದು, 2,728 ಮಂದಿ ಗುಣಮುಖರಾಗಿದ್ದಾರೆ. ಇಂದು 122 ಜನ ಡಿಸ್ಚಾರ್ಜ್ ಆಗಿದ್ದಾರೆ. ಇದು ಒಬ್ಬರು ಕೊರೊನಾದಿಂದ ಸಾವನ್ನಪ್ಪುವ ಮೂಲಕ ಇಂದುವರೆಗೂ ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!