Sunday, June 28, 2026
Homeತಾಜಾ ಸುದ್ದಿ16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

- Advertisement -
- Advertisement -

ಹೈದರಾಬಾದ್‌: ವಿಕಾರಾಬಾದ್‌ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಂಗಡಿ ಚಿಟ್ಟಂಪಳ್ಳಿ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಗ್ರಾಮದ ಹೊರ ವಲಯದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಮೃತದೇಹ ನೋಡಿದ ಸ್ಥಳೀಯರು ಗಸ್ತಿನಲ್ಲಿದ್ದ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆ ವೇಳೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಆದರೆ ಆರೋಪಿ ಪತ್ತೆಯಾಗಿಲ್ಲ. ಘಟನೆ ಕುರಿತಂತೆ ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!