ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 162 ಹೊಸ ಕೊರೊನಾ ಪ್ರಕರಣಗಳು ವರದಿಯಾಗುವ ಮೂಲಕ ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3991ಕ್ಕೆ ಏರಿಕೆಯಾಗಿದೆ. ಇನ್ನು ಮೂವರನ್ನು ಕೊರೊನಾ ಬಲಿ ಪಡೆದುಕೊಂಡಿದೆ.
ಸದ್ಯ ಜಿಲ್ಲೆಯಲ್ಲಿ 2682 ಸಕ್ರೀಯ ಪ್ರಕರಣಗಳಿದ್ದು, 1231 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಒಂದೇ ದಿನದಲ್ಲಿ 51 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ಇಂದು ಕೃಷ್ಣನಗರಿಯಲ್ಲಿ ವರದಿಯಾಗಿರುವ ಕೊರೊನಾ ಪ್ರಕರಣಗಳು ಭಾರೀ ಆತಂಕಕ್ಕೆ ಕಾರಣವಾಗಿದೆ. ಬರೋಬ್ಬರಿ 281 ಹೊಸ ಕೇಸುಗಳು ಪತ್ತೆಯಾಗುವ ಮೂಲಕ ಮತ್ತೆ ಉಡುಪಿಯಲ್ಲಿ ಕೊರೊನಾ ಆತಂಕವನ್ನು ಹೆಚ್ಚಿಸಿದೆ. ಅಲ್ಲದೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2686ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಬ್ಬರು ಇಂದು ಉಡುಪಿಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 910 ಸಕ್ರೀಯ ಪ್ರಕರಣಗಳಿದ್ದು 1765 ಮಂದಿ ಇದುವರೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 34 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.