- Advertisement -
![]()
- Advertisement -
ಗಲ್ಫ್ ಯುದ್ಧದಿಂದ ಸ್ಥಗಿತಗೊಂಡಿದ್ದ ವಿಮಾನ ಸಂಚಾರವು ಮಂಗಳವಾರ ಮತ್ತೆ ಆರಂಭಗೊಂಡಿದ್ದು, ಸಂಜೆ ಸುಮಾರು 5:30ಕ್ಕೆ ಮಸ್ಕತ್‌ನಿಂದ 169 ಪ್ರಯಾಣಿಕರನ್ನು ಹೊತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ 818 ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು.
ಈ ಬಗ್ಗೆ ಮಾತನಾಡಿದ ಪ್ರಯಾಣಿಕರೊಬ್ಬರು ಮಸ್ಕತ್‌ನಲ್ಲಿ ನಮಗೆ ಯಾವುದೇ ತೊಂದರೆಯಾಗಿಲ್ಲ. ಆದರೆ ವಿಮಾನ ಸಂಚಾರ ರದ್ದಾಗಿದ್ದರಿಂದ ತುಂಬಾ ಆತಂಕವಾಗಿತ್ತು ಎಂದು ತಿಳಿಸಿದರು.
ಇನ್ನು ಬಲ್ಲ ಮೂಲಗಳ ಪ್ರಕಾರ ಮಂಗಳವಾರ ಬೆಳಗ್ಗೆ 9:20ಕ್ಕೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್ 817 ಮಂಗಳೂರಿನಿಂದ ಮಸ್ಕತ್‌ಗೆ 147 ಪ್ರಯಾಣಿಕರನ್ನು ಕರೆದೊಯ್ದಿದೆ ಎಂದು ತಿಳಿದು ಬಂದಿದೆ.
- Advertisement -


