- Advertisement -
- Advertisement -
ಕಾಸರಗೋಡು: ಇಲ್ಲಿನ ಉಳಿಯತ್ತಡ್ಕ ಸಮೀಪದ ಶಿರಿಬಾಗಿಲಿನ ಮನೆಯೊಂದರಲ್ಲಿ ಸರಿಯಾದ ದಾಖಲೆ ಪತ್ರಗಳಿಲ್ಲದೆ ಬಚ್ಚಿಡಲಾಗಿದ್ದ 17.30 ಲಕ್ಷ ರೂ. ನಗದನ್ನು ಕಾಸರಗೋಡು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ನಗದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಗದಿನ ಕುರಿತು ಸರಿಯಾದ ದಾಖಲೆ ಪತ್ರಗಳನ್ನು ಹಾಜರುಪಡಿಸದ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಒಂದು ವೇಳೆ ಸರಿಯಾದ ದಾಖಲೆ ಪತ್ರ ನ್ಯಾಯಾಲಯದಲ್ಲಿ ಹಾಜರುಪಡಿಸಿದರೆ ಹಣ ವಾಪಸು ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -