Wednesday, June 26, 2024
Homeಕರಾವಳಿರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದುವೆರೆಗು 17 ಆರೋಪಿಗಳ ಬಂಧನ; ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದುವೆರೆಗು 17 ಆರೋಪಿಗಳ ಬಂಧನ; ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು : ದರ್ಶನ್ ಅಭಿಮಾನಿ ರೇಣುಕಾ ಸ್ವಾಮಿ  ಕೊಲೆ ಪ್ರಕರಣದಲ್ಲಿ ಇದುವೆರಗೂ 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು  ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ.ವ್ಯಕ್ತಿಯ ಕೊಲೆ ಮಾಡಿರುವುದು ಹೀನ, ಅತ್ಯಂತ ಹೇಯ ಕೃತ್ಯ. ಮೃಇತ ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ದೊರಕಿಸಿಕೊಡಬೇಕಿದೆ. ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸವಾಗುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸರ ಸಮಯ ಪ್ರಜ್ಞೆಯಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಬೇರೆ ಬೇರೆ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!