Thursday, June 4, 2026
Homeತಾಜಾ ಸುದ್ದಿಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ 17ರ ಬಾಲಕ!..

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ 17ರ ಬಾಲಕ!..

- Advertisement -
- Advertisement -

ಮಂಡ್ಯ:ಇಲ್ಲಿನ ಮದ್ದೂರು ತಾಲೂಕಿನ ಹುರುಗಲವಾಡಿ ಗ್ರಾಮದಲ್ಲಿ ನಡೆದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಯುವತಿ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾವೊಂದರ ಕೂಲಿ ಕಾರ್ಮಿಕರ ಕುಟುಂಬದಾಕೆ. ಈಕೆ ಕಬ್ಬಿನ ಗದ್ದೆಗೆ ತೆರಳಿದ್ದ ವೇಳೆ ಆರೋಪಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ,ಒಪ್ಪದಿದ್ದಾಗ ಕುಡುಗೋಲು ಬೀಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಆರೋಪಿ ನಂತರದಲ್ಲಿ ತನ್ನ ಕೃತ್ಯ ಮರೆಮಾಚಿ ಪರಾರಿಯಾಗಿದ್ದಾನೆ. ಪೊಲೀಸರು ಅನುಮಾನದ ಮೇಲೆ ತನಿಖೆ ನಡೆಸಿದಾಗ ಬಟ್ಟೆ ಮೇಲೆ ರಕ್ತದ ಕಲೆ ಕಂಡುಬಂದಿದ್ದು ತೀವ್ರ ತನಿಖೆಯ ನಂತರ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

- Advertisement -

Latest News

error: Content is protected !!