- Advertisement -
![]()
- Advertisement -
ಚಾಮರಾಜನಗರ: ಪದವಿ ಪೂರ್ವ ಕಾಲೇಜುಗಳ ಜೊತೆಗೆ ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಎಲ್ಲ ತರಗತಿಗಳನ್ನು ಆರಂಭಿಸುವ ಚಿಂತನೆ ಕೆಲವು ದಿನಗಳಿಂದ ನಡೆಯುತ್ತಿದೆ. ಈ ಕುರಿತಾಗಿ ನಾಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರೊಂದಿಗೆ ಸಭೆ ಕರೆಯಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪೋಷಕರು ಮತ್ತು ಸಂಸ್ಥೆಗಳು ಒಂದರಿಂದ 9ನೇ ತರಗತಿ, ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವ ಬೇಡಿಕೆ ಇದ್ದು, ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು. ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಈಗ ಅರ್ಧ ದಿನ ನಡೆಯುತ್ತಿದ್ದು ಪೂರ್ಣ ದಿನ ನಡೆಸಬೇಕೆಂಬ ಬೇಡಿಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದರು.
- Advertisement -


