Monday, June 8, 2026
Homeತಾಜಾ ಸುದ್ದಿವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ದುರಂತ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ

ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ದುರಂತ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ವಿಶಾಖಪಟ್ಟಣಂ: ಕರ್ನೂಲ್‌ನಲ್ಲಿ ಅಮೋನಿಯಾ ಅನಿಲ ಸೋರಿಕೆಯಿಂದಾಗಿ ಒಬ್ಬ ಕಾರ್ಮಿಕ ಸಾವನ್ನಪ್ಪಿದ ಎರಡು ದಿನಗಳ ನಂತರ, ಆಂಧ್ರಪ್ರದೇಶದ ವಿಶಾಖಪಟ್ಟಣಂನ ಜವಾಹರಲಾಲ್ ನೆಹರು ಫಾರ್ಮಾಸಿಟಿಕಲ್ ಸೈನರ್ ಲೈಫ್ ಸೈನ್ಸಸ್‌ನಲ್ಲಿ ಮತ್ತೊಂದು ಅನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ವಿಶಾಖಪಟ್ಟಣಂನ ಸೈನರ್ ಲೈಫ್ ಸೈನ್ಸಸ್ ಕಂಪನಿಯಲ್ಲಿ ಬೆಂಜಿಮಿಡಾಜೋಲ್ ಅನಿಲ ಸೋರಿಕೆಯಾಗಿದೆ. ಮಂಗಳವಾರ ಮುಂಜಾನೆ ಅನಿಲ ಸೋರಿಕೆ ದುರಂತ ಸಂಭವಿಸಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ವಿಷಾನಿಲ ಸೋರಿಕೆಯಾದ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರಿಂದ ಅವರು ಮೃತಪಟ್ಟಿದ್ದಾರೆ. ಗ್ಯಾಸ್ ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಹಿಡಿಯಲಾಗಿದೆ ಎಂದು ಪರ್ವಾದ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಉದಯ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಪ್ರಕರಣದ ಕುರಿತು ಮಾಹಿತಿ ಪಡೆದ ಮುಖ್ಯಮಂಯತ್ರಿ ಜಗನ್ ಮೋಹನ್ ರೆಡ್ಡಿ ದುರಂತ ಸಂಭವಿಸಿದ ತಕ್ಷಣ ಕಾರ್ಖಾನೆಯನ್ನು ಮುಚ್ಚಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!