Tuesday, May 14, 2024
Homeಕರಾವಳಿಡ್ರಗ್ಸ್ ಮಾರಾಟ ಪ್ರಕರಣ: ನೈಜೀರಿಯಾ ಪ್ರಜೆಗಳನ್ನ ಖೆಡ್ಡಾಗೆ ಕೆಡವಿದ ಮಂಗಳೂರು ಪೊಲೀಸರು

ಡ್ರಗ್ಸ್ ಮಾರಾಟ ಪ್ರಕರಣ: ನೈಜೀರಿಯಾ ಪ್ರಜೆಗಳನ್ನ ಖೆಡ್ಡಾಗೆ ಕೆಡವಿದ ಮಂಗಳೂರು ಪೊಲೀಸರು

spot_img
- Advertisement -
- Advertisement -

ಮಂಗಳೂರು: ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತ ನೈಜೀರಿಯಾ ಪ್ರಜೆಗಳನ್ನು ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ಎಂದು ಗುರುತಿಸಲಾಗಿದೆ. ಇವರಿಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಈ ಆರೋಪಿಗಳು ಟೀ ಶರ್ಟ್​ ಎಕ್ಸ್​ಪೋರ್ಟ್​ ಉದ್ಯಮದ ಹೆಸರು ಹೇಳಿಕೊಂಡು ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಆದರೆ ಸೂಕ್ತ ತನಿಖೆ ನಡೆಸಿದ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಅವಿತಿದ್ದ ಆರೋಪಿಗಳನ್ನ ಖೆಡ್ಡಾಗೆ ಕೆಡುವವಲ್ಲಿ ಯಶಸ್ವಿಯಾಗಿದ್ದಾರೆ. ಈ ಆರೋಪಿಗಳು ಮಂಗಳೂರು ಹಾಗೂ ಕೇರಳ ಭಾಗದಲ್ಲಿ ಡ್ರಗ್​ ಸಪ್ಲೈ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರಕರಣದಡಿಯಲ್ಲಿ ಈಗಾಗಲೇ 7 ಮಂದಿಯನ್ನ ಬಂಧಿಸಿದ್ದ ಪೊಲೀಸರು ಇದೀಗ ಇನ್ನಿಬ್ಬರನ್ನ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 9 ಮಂದಿ ಬಂಧಿತರಲ್ಲಿ ಮೂವರು ನೈಜೀರಿಯಾ ಪ್ರಜೆಗಳು ಎಂದು ತಿಳಿದು ಬಂದಿದೆ. ಬಂಧಿತರಿಂದ 170 ಗ್ರಾಂ ಎಂಡಿಎಂಎ ನಿಷೇಧಿತ ಡ್ರಗ್​ನ್ನು ವಶಕ್ಕೆ ಪಡೆದಿದ್ದಾರೆ.

- Advertisement -
spot_img

Latest News

error: Content is protected !!