Saturday, April 20, 2024
Homeತಾಜಾ ಸುದ್ದಿಕ್ರೀಡಾಪಟುಗಳಿಗೆ ನೌಕರಿಯಲ್ಲಿ ಮೀಸಲಾತಿ ಎಲ್ಲಾ ಇಲಾಖೆಗಳಿಗೂ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಕ್ರೀಡಾಪಟುಗಳಿಗೆ ನೌಕರಿಯಲ್ಲಿ ಮೀಸಲಾತಿ ಎಲ್ಲಾ ಇಲಾಖೆಗಳಿಗೂ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ 2% ಮೀಸಲಾತಿ ಪ್ರಮಾಣವನ್ನು ಎಲ್ಲಾ ಇಲಾಖೆಗಳಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮತ್ತು ಪದಕ ವಿಜೇತ ಕ್ರೀಡಾಪಟುಗಳಿಗೆ ಸನ್ಮಾನ ಸಮಾರಂಭದಲ್ಲಿ ಈ ಘೋಷಣೆ ಮಾಡಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಕ್ರೀಡಾಪಟುಗಳಿಗೆ ಶೇಕಡಾ 2 ರಷ್ಟು ಮೀಸಲಾತಿಯನ್ನು ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟಿದ್ದು, ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕ್ರೀಡಾಪಟುಗಳ ಜೀವನಕ್ಕೆ ಭದ್ರತೆ ಬೇಕು ಎನ್ನುವುದನ್ನು ಸರ್ಕಾರ ಮನಗಂಡಿದೆ. ಮನಸ್ಸಿನಲ್ಲಿ ಕ್ರೀಡೆಯನ್ನು ನನಗೋಸ್ಕರ ಹಾಗೂ ದೇಶಕ್ಕಾಗಿ ಪದಕ ಗೆಲ್ಲಲು ಆಡುತ್ತಿದ್ದೇನೆ ಎನ್ನುವುದನ್ನು ಮಾತ್ರ ಕ್ರೀಡಾಪಟುಗಳು ಮರೆಯಬಾರದು. ಮಿಕ್ಕಿದ್ದನ್ನು ಸರ್ಕಾರಕ್ಕೆ ಬಿಡಿ. ನಿಮ್ಮ ಸಾಧನೆಗಳಿಗೆ ತಕ್ಕಂತೆ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದ್ದಾರೆ

- Advertisement -
spot_img

Latest News

error: Content is protected !!