Saturday, May 11, 2024
Homeಕರಾವಳಿಉಡುಪಿರಾಜ್ಯ ಬಜೆಟ್ ನಲ್ಲಿ ಕರಾವಳಿಗೆ ಸಿಕ್ಕಿದ್ದೇನು?

ರಾಜ್ಯ ಬಜೆಟ್ ನಲ್ಲಿ ಕರಾವಳಿಗೆ ಸಿಕ್ಕಿದ್ದೇನು?

spot_img
- Advertisement -
- Advertisement -

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳಿಗೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಒಟ್ಟು 20 ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಕರಾವಳಿ ಭಾಗದ ಭೌಗೋಳಿಕ, ಔದ್ಯೋಗಿಕ, ಸಾಂಸ್ಕೃತಿಕ, ಶೈಕ್ಷಣಿಕ ‌ಮತ್ತು ಧಾರ್ಮಿಕ ಪರಿಸರವನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ನೀಡಲಾಗಿದೆ. ರಾಜ್ಯ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳಿಗೆ ಸಿಕ್ಕಿದ್ದೇನು ಗೊತ್ತಾ?

  1. ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಸಂಯೋಜನೆಯೊಂದಿಗೆ 100 ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ಮತ್ಸ್ಯ ಸಿರಿ ಯೋಜನೆ ಜಾರಿ.
  2. ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರು ತಡೆಗಟ್ಟಲು ಖಾರ್ ಲ್ಯಾಂಡ್ ಯೋಜನೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಗಳಲ್ಲಿಯೂ ಅನುಷ್ಠಾನ.
  3. ಮಂಗಳೂರಿನಲ್ಲಿ ಸ್ಟಾರ್ಟಪ್ ಗಳಿಗೆ ಪ್ರೋತ್ಸಾಹ ನೀಡಲು 20 ಕೋಟಿ ರೂ. ವೆಚ್ಚದಲ್ಲಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಫಾರ್ ಸ್ಟಾರ್ಟಪ್ಸ್ ಸ್ಥಾಪನೆ.
  4. ಮಂಗಳೂರಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 1000 ಸಾಮರ್ಥ್ಯದ ಬಹು ಮಹಡಿ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ಸಮುಚ್ಛಯ ನಿರ್ಮಾಣ.
  5. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ.
  6. ಕೇಂದ್ರ ಸಾಗರ ಮಾಲಾ ಯೋಜನೆಯಡಿ 1,880 ಕೋಟಿ ರೂ.‌ ಅಂದಾಜು ವೆಚ್ಚದ 24 ಯೋಜನೆ ಅನುಷ್ಠಾನ.
  7. ಕಾರವಾರ ಬಂದರು ವಿಸ್ತರಣೆ.
  8. ಬೈಂದೂರು ಮತ್ತು ಮಲ್ಪೆ ಯಲ್ಲಿ ವಿವಿದ್ದೋದ್ದೇಶ ಬಂದರು ನಿರ್ಮಾಣಕ್ಕೆ ಕಾರ್ಯ ಸಾಧ್ಯತಾ ವರದಿ ತಯಾರಿ.
  9. ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಪ್ರಧಾನ ಮಂತ್ರಿ ಮತ್ದ್ಯ ಸಂಪದ ಯೋಜನೆಯಡಿ 250 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿರ್ಮಾಣ.
  10. ಹಳೆ ಮಂಗಳೂರು ಬಂದರಿನಲ್ಲಿ 350 ಕೋಟಿ ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ ಮತ್ತು ಲಕ್ಷದ್ವೀಪಕ್ಕೆ ಮೀಸಲಾದ ಜೆಟ್ಟಿ ಮತ್ತು ಇತರ ಸಂಬಂಧಿತ ಮೂಲ ಸೌಕರ್ಯ ಸೌಲಭ್ಯ ಸ್ಥಾಪನೆ.
  11. ಉತ್ತರ ಕನ್ನಡ ಜಿಲ್ಲೆಯ ಕೇಣಿ-ಬೆಳಕೇರಿಯಲ್ಲಿ ಗ್ರೀನ್ ಫೀಲ್ಡ್ ಬಂದರು ಅಭಿವೃದ್ಧಿ.
  12. ಕಾರವಾರದಲ್ಲಿ ರಾಜ್ಯದ ಮೊದಲ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆ ಸ್ಥಾಪನೆ.
  13. ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜನೆ.
    ಕಾಸರಗೋಡಿ‌ನಲ್ಲಿ ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಕನ್ನಡ ಭವನ ನಿರ್ಮಾಣ.
  14. ಕಡಲ ತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿಆರ್ ಝೆಡ್ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮ.
  15. ತದಡಿ ಬಂದರಿನಲ್ಲಿ ಸಮಗ್ರ ಪರಿಸರ-ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ.
  16. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭ.
  17. ಕರಾವಳಿ ಭಾಗದ ಜಲ ಮೂಲಗಳಲ್ಲಿನ ಪ್ಲಾಸ್ಟಿಕ್ ಮಾಲಿನ್ಯ ನಿವಾರಿಸಲು ದೇಶದಲ್ಲೇ ಮೊದಲ 840 ಕೋಟಿ ರೂ. ವೆಚ್ಚದ ವಿನೂತನ ಬ್ಲೂ-ಪ್ಲಾಸ್ಟಿಕ್ ನಿರ್ವಹಣೆ ಯೋಜನೆ ಜಾರಿ.
  18. ಮಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಪ್ರಾರಂಭ.
  19. ಕಡಲು ಕೊರೆತ ತಡೆಗಟ್ಟಲು ಹೊಸ ತಂತ್ರಜ್ಞಾನ ಬಳಕೆ.
    ತದಡಿ-ಅಘನಾಶಿನಿ ಮಧ್ಯೆ ಕಡವು ದೋಣಿ ಮಾರ್ಗ ಪ್ರಾರಂಭಿಸಲು ಪ್ರಸ್ತಾಪ.
  20. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆ.

- Advertisement -
spot_img

Latest News

error: Content is protected !!