Monday, August 31, 2026
Homeಕರಾವಳಿಉಡುಪಿಮಂಗಳೂರು: ರಾಜ್ಯದಲ್ಲಿ ರಸ್ತೆ ದುರಸ್ತಿಗೆ 200 ಕೋಟಿ ರೂ. ಬಿಡುಗಡೆ: ದ.ಕ.ಜಿಲ್ಲೆಗೆ 12 ಕೋಟಿ, ಉಡುಪಿಗೆ...

ಮಂಗಳೂರು: ರಾಜ್ಯದಲ್ಲಿ ರಸ್ತೆ ದುರಸ್ತಿಗೆ 200 ಕೋಟಿ ರೂ. ಬಿಡುಗಡೆ: ದ.ಕ.ಜಿಲ್ಲೆಗೆ 12 ಕೋಟಿ, ಉಡುಪಿಗೆ 7.5ಕೋಟಿ ಹಣ: ಸಚಿವ ಸಿ.ಸಿ. ಪಾಟೀಲ್‌

- Advertisement -
- Advertisement -

ಮಂಗಳೂರು: ರಸ್ತೆ ದುರಸ್ತಿಗೆ ಸರ್ಕಾರದಿಂದ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 12 ಕೋಟಿ, ಉಡುಪಿ ಜಿಲ್ಲೆಗೆ 7.5ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ ಸಿ ಪಾಟೀಲ್ ಮಳೆಯಿಂದಾಗಿ ರಸ್ತೆ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದರು. ಮಳೆಬಿಟ್ಟ ತಕ್ಷಣವೇ ರಸ್ತೆ ದುರಸ್ತಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

- Advertisement -

Latest News

error: Content is protected !!