Friday, May 17, 2024
Homeತಾಜಾ ಸುದ್ದಿ200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡೀಸ್‌ ಕೂಡಾ ಆರೋಪಿ

200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡೀಸ್‌ ಕೂಡಾ ಆರೋಪಿ

spot_img
- Advertisement -
- Advertisement -

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ ಈಗ ಬರೋಬ್ಬರಿ 200 ಕೋಟಿ ರೂಪಾಯಿ ಹಣ ವಸೂಲಿ, ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಇ.ಡಿ. ಅಧಿಕಾರಿಗಳು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ರನ್ನು ಆರೋಪಿಯನ್ನಾಗಿಸಿ ಇಂದು ದೆಹಲಿಯ ಇ.ಡಿ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಾರೆ.

ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ ಬರೋಬ್ಬರಿ 200 ಕೋಟಿ ರೂಪಾಯಿ ಹಣವನ್ನು ಜೈಲಿನಲ್ಲಿರುವ ಉದ್ಯಮಿ ಖೈದಿಯನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿ ಉದ್ಯಮಿ ಪತ್ನಿಯನ್ನು ನಂಬಿಸಿ ವಸೂಲಿ ಮಾಡಿದ್ದ. ಬಳಿಕ ಉದ್ಯಮಿ ಪತ್ನಿಗೆ ತಾನು ಮೋಸ ಹೋಗಿರುವುದು ಗೊತ್ತಾಯಿತು. ಈ 200 ಕೋಟಿ ರೂಪಾಯಿ ಹಣದಲ್ಲಿ ಹತ್ತು ಕೋಟಿ ರೂಪಾಯಿ ಹಣವನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಗಿಫ್ಟ್ ನೀಡಿದ್ದ.

ಈಗ ಜಾರಿ ನಿರ್ದೇಶನಾಲಯ ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಕೂಡ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದೆ. ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಕೇಶ್ ಚಂದ್ರಶೇಖರ್ ವಂಚನೆ ಮಾಡಿ ಹಣ ಗಳಿಸಿದ್ದಾನೆ ಎಂಬುದು ಗೊತ್ತಿತ್ತು ಎಂದು ಇ.ಡಿ. ಹೇಳಿದೆ. ಇದರಿಂದ ಸುಕೇಶ್ ಚಂದ್ರಶೇಖರ್ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಆರೋಪಿಯನ್ನಾಗಿ ಮಾಡಲು ಇ.ಡಿ. ನಿರ್ಧರಿಸಿದೆ.

- Advertisement -
spot_img

Latest News

error: Content is protected !!