- Advertisement -
- Advertisement -
ನವದೆಹಲಿ: ಐಸಿಎಂಆರ್ ಹಾಗೂ ಏಮ್ಸ್ ನಡೆಸಿದ ಅಧ್ಯಯನದಲ್ಲಿಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಹಿರಂಗವಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು, ಕೋವಿಡ್-19 ಲಸಿಕೆಗಳು ಹಾಗೂ ಹೃದಯಾಘಾತದಿಂದ ಉಂಟಾಗುವ ಸಾವುಗಳ ಹೆಚ್ಚಳದ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ ಎಂದು ಹೇಳಿದೆ.
ವಯಸ್ಕರಲ್ಲಿ ಹಠಾತ್ ಸಾವಿನ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಅಖಿಲ್ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ನಡೆಸಿದ ವ್ಯಾಪಕ ಅಧ್ಯಯನಗಳ ಕುರಿತು ಸಚಿವಾಲಯವು ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಈ ಸಾವುಗಳು ಅನುವಂಶಿಕತೆ, ಜೀವನಶೈಲಿ ಸೇರಿದಂತೆ ವಿವಿಧ ಕಾರಣಗಳಿಂದ ಹಠಾತ್ ಹೃದಯಘಾತ ಸಾವುಗಳು ಸಂಭವಿಸಬಹುದು ಎಂದು ಸ್ಪಷ್ಟಪಡಿಸಿದೆ.
- Advertisement -