Tuesday, May 21, 2024
Homeಕರಾವಳಿಪಡ್ಡಾಯಿ ಮತ್ತು ಸೋಫಿಯಾ ಚಲನಚಿತ್ರಗಳಿಗೆ 2017ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರದಾನ

ಪಡ್ಡಾಯಿ ಮತ್ತು ಸೋಫಿಯಾ ಚಲನಚಿತ್ರಗಳಿಗೆ 2017ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರದಾನ

spot_img
- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ತೃತೀಯ ಅತ್ಯುತ್ತಮ ಚಲನಚಿತ್ರವಾಗಿ ಪಡ್ಡಾಯಿ ತುಳು ಚಲನಚಿತ್ರ ಮತ್ತು ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರವಾಗಿ ಕೊಂಕಣಿ ಚಲನಚಿತ್ರ ಸೋಫಿಯಾಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪ್ರಶಸ್ತಿ 50 ಸಾವಿರ ರೂಪಾಯಿ ನಗದು ಮತ್ತು ಫಲಕ ಒಳಗೊಂಡಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯಕ್ರಮ ಆಯೋಜಿಸಿತ್ತು.

ಚಿತ್ರನಟಿ ಲಕ್ಷ್ಮೀ ಅವರಿಗೆ ಜೀವಮಾನ ಸಾಧನೆಗೆ ಡಾ. ರಾಜಕುಮಾರ್ ಪ್ರಶಸ್ತಿ, ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ವಿಷ್ಣು ವರ್ಧನ್ ಪ್ರಶಸ್ತಿ ದಿ. ಜಿ.ಎಂ. ಲಕ್ಷ್ಮೀಪತಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಈ ಸಂದರ್ಭದಲ್ಲಿ ರಾಘವೇಂದ್ರ ರಾಜಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಮ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತು ಆಯುಕ್ತ ಡಾ. ಪಿ.ಎಸ್. ಹರ್ಷ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!