Thursday, May 2, 2024
Homeಪ್ರಮುಖ-ಸುದ್ದಿ2023ನೇ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ಕರಾವಳಿಯ 2 ಸಂಸ್ಥೆಗಳು ಮತ್ತು 6 ಸಾಧಕರಿಗೆ ಪ್ರಶಸ್ತಿ ಘೋಷಣೆ

2023ನೇ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ಕರಾವಳಿಯ 2 ಸಂಸ್ಥೆಗಳು ಮತ್ತು 6 ಸಾಧಕರಿಗೆ ಪ್ರಶಸ್ತಿ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ರಾಜ್ಯೋತ್ಸವ ಪ್ರಶಸ್ತಿ 2023’ರ ಪಟ್ಟಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗಿದೆ.

ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ವಿಶೇಷವಾಗಿ 10 ಸಂಘ-ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇನ್ನು ಸಂಘ-ಸಂಸ್ಥೆಗಳ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಮತ್ತು ಮಾರುತಿ ಜನಸೇವಾ ಸಂಘಕ್ಕೆ ಪ್ರಶಸ್ತಿ ನೀಡಲಾಗಿದೆ.

ಜಾನಪದ, ಸಮಾಜಸೇವೆ, ಆಡಳಿತ, ವೈದ್ಯಕೀಯ, ಸಾಹಿತ್ಯ, ಸಂಗೀತ-ನೃತ್ಯ, ಚಲನಚಿತ್ರ, ರಂಗಭೂಮಿ, ಶಿಲ್ಪಕಲೆ/ಚಿತ್ರಕಲೆ/ಕರಕುಶಲ, ಯಕ್ಷಗಾನ/ಬಯಲಾಟ, ಶಿಕ್ಷಣ, ಕ್ರೀಡೆ, ನ್ಯಾಯಾಂಗ, ಕೃಷಿ ಪರಿಸರ, ಸಂಕೀರ್ಣ, ಮಾಧ್ಯಮ, ವಿಜ್ಞಾನ/ತಂತ್ರಜ್ಞಾನ, ಹೊರನಾಡು-ಹೊರದೇಶ, ಸ್ವಾತಂತ್ಯ್ರ ಹೋರಾಟ ಕ್ಷೇತ್ರಗಳಲ್ಲಿ ಗಣನೀಯ ಸೇವೆಗೈದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಯಕ್ಷಗಾನ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಅರ್ಗೋಡು ಮೋಹನದಾಸ್ ಶೆಣೈ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆ. ಲೀಲಾವತಿ ಬೈಪಡಿತ್ತಾಯ, ಸಮಾಜ ಸೇವೆ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಹಸನಬ್ಬ, ವೈದ್ಯಕೀಯ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಪ್ರಶಾಂತ್ ಶೆಟ್ಟಿ, ಸಂಕೀರ್ಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಹಾಜಿ ಅಬ್ದುಲ್ಲಾ ಪರ್ಕಳ, ಮಾಧ್ಯಮ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದಿನೇಶ್ ಅಮೀನ್ ಮಟ್ಟು ಅವರಿಗೆ ಪ್ರಶಸ್ತಿ ನೀಡಲಾಗಿದೆ.

ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆಗೈದ ಇಸ್ರೋ ಸಂಸ್ಥೆಯ ಮುಖ್ಯಸ್ಥ ಸೋಮನಾಥ ಅವರಿಗೂ ಪ್ರಶಸ್ತಿ ಲಭಿಸಿರುತ್ತದೆ. ಪ್ರಶಸ್ತಿ ಪಟ್ಟಿಯ ಪ್ರಕಾರ 13 ಮಹಿಳೆಯರು ಮತ್ತು 54 ಪುರುಷರು ಹಾಗೂ ಮತ್ತು ಒಬ್ಬರು ಮಂಗಳ ಮುಖಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಬಾರಿಯ ವಿಶೇಷವೆಂಬಂತೆ 100 ವರ್ಷ ದಾಟಿದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿಯು ಲಭಿಸುತ್ತಿದೆ. ಒಬ್ಬರು ದಾವಣಗೆರೆ ಹಾಗೂ ಇನ್ನೊಬ್ಬರು ಉತ್ತರ ಕನ್ನಡ ಜಿಲ್ಲೆಯವರು.

ಪ್ರಶಸ್ತಿ 5 ಲಕ್ಷ ರೂಪಾಯಿ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ಒಳಗೊಂಡಿದ್ದು, ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

- Advertisement -
spot_img

Latest News

error: Content is protected !!