Sunday, June 14, 2026
Homeಕರಾವಳಿಉಡುಪಿಉಡುಪಿಯಲ್ಲಿ ಅಬ್ಬರಿಸಿ ಬೊಬ್ಬಿಡುತ್ತಿದೆ ವಿನಾಶಕಾರಿ ಕೊರೋನಾ: ಒಂದೇ ದಿನ 210 ಜನರ ದೇಹಕ್ಕೆ ಅಂಟಿದ ಸೋಂಕು

ಉಡುಪಿಯಲ್ಲಿ ಅಬ್ಬರಿಸಿ ಬೊಬ್ಬಿಡುತ್ತಿದೆ ವಿನಾಶಕಾರಿ ಕೊರೋನಾ: ಒಂದೇ ದಿನ 210 ಜನರ ದೇಹಕ್ಕೆ ಅಂಟಿದ ಸೋಂಕು

- Advertisement -
- Advertisement -

ಉಡುಪಿ: ಕರಾವಳಿ ಜಿಲ್ಲೆ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿದೆ. ಸುಮಾರು ಒಂದು ತಿಂಗಳ ಹಿಂದೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದೆ ಗ್ರೀನ್ ಜೋನ್ ನಲ್ಲಿ ಸೇಫ್ ಆಗಿ ಇದ್ದ ಉಡುಪಿ ಜಿಲ್ಲೆ ಇದೀಗ, ಅತಿ ಹೆಚ್ಚು ಕೊರೋನಾ ಸೋಂಕಿತರ ಜಿಲ್ಲೆಯಾಗಿ ಮಾರ್ಪಟ್ಟಿದ್ದೆ.

ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಿರಾಳವಾಗಿದ್ದ ಉಡುಪಿ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ರಾಕೆಟ್ ವೇಗದಲ್ಲಿ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಂಡಿದೆ.

- Advertisement -

Latest News

error: Content is protected !!