Saturday, May 4, 2024
Homeಪ್ರಮುಖ-ಸುದ್ದಿಇಂದು 21 ನೇ ಕಾರ್ಗಿಲ್ ವಿಜಯ್ ದಿವಸ್ : ದೇಶಕ್ಕಾಗಿ ಹುತಾತ್ಮರಾದ ವೀರ ಯೋಧರಿಗೆ ನಮನ

ಇಂದು 21 ನೇ ಕಾರ್ಗಿಲ್ ವಿಜಯ್ ದಿವಸ್ : ದೇಶಕ್ಕಾಗಿ ಹುತಾತ್ಮರಾದ ವೀರ ಯೋಧರಿಗೆ ನಮನ

spot_img
- Advertisement -
- Advertisement -

ನವದೆಹಲಿ: ಭಾರತದ ಮೇಲೆ ದಾಳಿ ನಡೆಸಿದ ಪಾಕಿಸ್ತಾನ ಸೇನೆಯನ್ನು ಮಣಿಸಿ, ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಭಾರತಿಯ ಯೋಧರಿಗೆ ಗೌರವ ನೀಡುವ ಸಲುವಾಗಿ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಸುಮಾರು 60 ದಿನಗಳ ಕಾಲ ನಡೆದ ಕಾರ್ಗಿಲ್ ಕದನದಲ್ಲಿ ಪಾಕಿಸ್ತಾನವನ್ನು ಮಣಿಸಿ ದೇಶವನ್ನು ರಕ್ಷಿಸಿ ಸುಮಾರು ೫೦೦ ಕ್ಕೂ ಹೆಚ್ಚು ಸೈನಿಕರು ಪ್ರಾಣತ್ಯಾಗ ಮಾಡಿದ್ದರು.

ಅಂದು 1999ರ ಮೇ ಮತ್ತು ಜುಲೈನ 2 ತಿಂಗಳುಗಳ ನಡುವೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಈ ಯುದ್ಧದಲ್ಲಿ ಪಾಕಿಸ್ತಾನದ ಸೈನಿಕರು ಅಕ್ರಮವಾಗಿ ಕಾಶ್ಮೀರದ ಕಾರ್ಗಿಲ್ ಸೇರಿದಂತೆ ಬಹುತೇಕ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಭಾಗಗಳನ್ನು ಆಕ್ರಮಿಸಿಕೊಂಡಿದ್ದರು. ಪಾಕ್ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರ ಸೈನಿಕರು ಪಾಕಿಸ್ತಾನದ ಪಡೆಗಳು ಮತ್ತು ಉಗ್ರಗಾಮಿಗಳು LoCಯಲ್ಲಿ ಆಕ್ರಮಿಸಿಕೊಂಡ ಭಾರತದ ಬಹುತೇಕ ನೆಲೆಗಳನ್ನು ಭಾರತೀಯ ವಾಯು ಪಡೆಯ ಬೆಂಬಲದೊಂದಿಗೆ ಮರುವಶಕ್ಕೆ ತೆಗೆದುಕೊಂಡಿತು. ಅಂತಾರಾಷ್ಟ್ರೀಯವಾಗಿ ರಾಜತಾಂತ್ರಿಕ ವಿರೋಧ ವ್ಯಕ್ತವಾಗಿದ್ದರಿಂದಾಗಿ, ಪಾಕಿಸ್ತಾನದ ಪಡೆಗಳು LOCಯ ಭಾರತದ ನೆಲೆಗಳಿಂದ ಬಲವಂತವಾಗಿ ಹಿಂದಕ್ಕೆ ಸರಿಯಬೇಕಾಯಿತು.

ಈ ಯುದ್ಧ ಜುಲೈ ೨೬ ರಂದು ಕೊನೆಗೊಂಡಿದ್ದು, ಪಾಕಿಸ್ತಾನ ಭಾರತಕ್ಕೆ ಸಂಪೂರ್ಣವಾಗಿ ಶರಣಾಗಿತ್ತು. ಇದೆ ದಿವಸವನ್ನು ಸೈನಿಕರ ತ್ಯಾಗ, ಬಲಿದಾನದ ಹಿನ್ನೆಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಎಂದು ಕರೆಯಲಾಗುತ್ತದೆ.

- Advertisement -
spot_img

Latest News

error: Content is protected !!