Thursday, May 2, 2024
Homeತಾಜಾ ಸುದ್ದಿಒಡಿಶಾದಲ್ಲಿ ಭೀಕರ ರೈಲು ಅಪಘಾತ; ಸಾವನ್ನಪ್ಪಿದವರ ಸಂಖ್ಯೆ 233ಕ್ಕೆ ಏರಿಕೆ, 900ಕ್ಕೂ ಹೆಚ್ಚು ಮಂದಿಗೆ ಗಾಯ

ಒಡಿಶಾದಲ್ಲಿ ಭೀಕರ ರೈಲು ಅಪಘಾತ; ಸಾವನ್ನಪ್ಪಿದವರ ಸಂಖ್ಯೆ 233ಕ್ಕೆ ಏರಿಕೆ, 900ಕ್ಕೂ ಹೆಚ್ಚು ಮಂದಿಗೆ ಗಾಯ

spot_img
- Advertisement -
- Advertisement -

ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆಡ ಪರಿಣಾಮ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಈ ಕುರಿತು ಮಾಹಿತಿ ನೀಡಿರುವ ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ, ಒಡಿಶಾದ ಬಾಲಸೋರ್ ನಲ್ಲಿ ಭೀಕರ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಕುರಿತು ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಹೇಳಿದ್ದಾರೆ.

ಸಹಾಯವಾಣಿ ಆರಂಭ

ಬಾಲಸೋರ್ ನ ಬಹನಾಗ ನಿಲ್ದಾಣದ ಬಳಿ ಶಾಲಿಮಾರ್- ಚೆನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಗೂಡ್ಸ್ ಗಾಡಿಗೆ ಡಿಕ್ಕಿಯಾಗಿ ಹಳಿತಪ್ಪಿದ ಬೆನ್ನಲ್ಲೇ, ಬೆಂಗಳೂರು-ಹೌರಾ ರೈಲು ಕೂಡ ಹಳಿತಪ್ಪಿ 3-4 ಬೋಗಿಗಳು ಜಖಂಗೊಂಡಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಕೂಡ ಆರಂಭಿಸಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಅವರು, ಒಡಿಶಾದ ಬಾಲಸೋರ್ ನ ಬಹನಾಗದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ನ 10-12 ಬೋಗಿಗಳು ಬಾಲೇಶ್ವರ್ ಬಳಿ ಹಳಿ ತಪ್ಪಿ ವಿರುದ್ಧ ಹಳಿಗೆ ಬಿದ್ದಿವೆ ಎಂದಿದ್ದಾರೆ.ಇನ್ನೂ ಈ ರೈಲಿನ ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಗೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅದರ 3-4 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿಸಿದ್ದಾರೆ.

ಇದೀಗ ನೈರುತ್ಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗಾಗಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಸಂಬಂಧಪಟ್ಟ ಕುಟುಂಬಸ್ಥರು ಸಂಪರ್ಕಿಸುವಂತೆ ತಿಳಿಸಿದೆ.

 ನೈಋತ್ಯ ರೈಲ್ವೆ ಆರಂಭಿಸಿದ ಸಹಾಯವಾಣಿ ಸಂಖ್ಯೆಗಳು

ಬೆಂಗಳೂರು 080-22356409

ಬಂಗಾರಪೇಟೆ: 08153 255253

ಕುಪ್ಪಂ : 8431403419

SMVB : 09606005129

KJM :+91 88612 03980

- Advertisement -
spot_img

Latest News

error: Content is protected !!