- Advertisement -
- Advertisement -
ಮಂಗಳೂರು : ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಇಂದು ಬಿಡುಗಡೆ ಮಾಡಿದೆ ಎಂದು ರಾಜ್ಯ ಮೀನುಗಾರಿಕೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಸಾಲ ಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಮ್ಮ ಹೇಳಿಕೆಯಲ್ಲಿ ತಿಳಿಸಿದರು.
ಲಾಕ್ ಡೌನ್ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂ. ಬಿಡುಗಡೆ ಮಾಡಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಹಾಗೂ ಸಹಕಾರ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್‌ಗೆ ಧನ್ಯವಾದವನ್ನು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -