- Advertisement -
![]()
- Advertisement -
ಮೂಡಬಿದಿರೆ: ವಿದ್ಯಾಗಿರಿ ಕೃಷಿ ಸಿರಿ ಆವರಣದಲ್ಲಿ 23ನೇ ವರ್ಷದ ಇಫ್ತಾರ್ ಕೂಟವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ಸೇರಿ ಸುಮಾರು 6 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ರಂಝಾನ್ ಸಂದೇಶ ನೀಡಿದ ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯ ಅನೀಸ್ ಕೌಸರಿ ಅವರು, ಇಂದಿನ ಸಮಾಜದಲ್ಲಿ ಹೆಚ್ಚುತ್ತಿರುವ ಭಿನ್ನಾಭಿಪ್ರಾಯಗಳ ನಡುವೆ ಇಫ್ತಾರ್‌ನಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿವೆ. ಇವು ವಿಭಿನ್ನ ಧರ್ಮಗಳ ನಡುವೆ ಪರಸ್ಪರ ಗೌರವ ಹಾಗೂ ಸಾಮರಸ್ಯವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
- Advertisement -


