Monday, June 8, 2026
Homeಕರಾವಳಿಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇನ್ನು ಮುಂದೆ 24 ಗಂಟೆ ತಪಾಸಣೆ: ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ...

ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇನ್ನು ಮುಂದೆ 24 ಗಂಟೆ ತಪಾಸಣೆ: ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ: ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್

- Advertisement -
- Advertisement -

ಬಂಟ್ವಾಳ: ಮುಂಬರುವ ದಿನಗಳಿಂದ ಕೊಡಂಗೆ ಚೆಕ್ ಪೋಸ್ಟ್‌‌ನಲ್ಲಿ ದಿನದ 24ಗಂಟೆಯು ಸಿಬ್ಬಂದಿಗಳು ಇರಲಿದ್ದು, ವಾಹನ ತಪಾಸಣೆ ನಡೆಯಲಿದೆ. ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ರವರು ಹೇಳಿದರು.

ಅವರು ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಕೇರಳ ಕರ್ನಾಟಕ ಗಡಿಪ್ರದೇಶವಾದ ಕೊಡಂಗೆ ಎಂಬಲ್ಲಿನ ಜು.3ರಂದು ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರಿಂದ ಮಾಹಿತಿ ಪಡೆದುಕೊಂಡರು.

ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಕೇರಳವನ್ನು ಸಂಪರ್ಕಿಸುವ ಪ್ರಧಾನ ರಸ್ತೆಗಳಲ್ಲಿ ಒಂದಾಗಿದ್ದು, ಈ ಮುಖೇನ ಕರ್ನಾಟಕದಲ್ಲಿ ದುಷ್ಕೃತ್ಯ ನಡೆಸಿ ಕೇರಳಕ್ಕೆ ಪಲಾಯನ ನಡೆಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಚೆಕ್ ಪೋಸ್ಟ್ ಅನ್ನು ಇನ್ನಷ್ಟು ಭಲಗೊಳಿಸುವ ನಿಟ್ಟಿನಲ್ಲಿ ಆಲೋಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಚೆಕ್ ಪೋಸ್ಟ್ ಕ್ರಮವು ಮರ, ಮರಳು, ದನ ಸಹಿತ ಅಕ್ರಮ ಸಾಗಾಟ ಹಾಗೂ ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತಷ್ಟು ಸಹಕಾರಿಯಾಗಲಿದೆ. ವಿಟ್ಲ ಠಾಣಾ ವ್ಯಾಪ್ತಿಯು ದೊಡ್ಡದಿರುವ ಹಿನ್ನೆಲೆಯಲ್ಲಿ ಇದೀಗಾಗಲೇ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚುಮಾಡಿ ಇತರ ಕಡೆಗಳಿಂದ ವರ್ಗಾವಣೆ ಮಾಡಲಾಗಿದೆ‌ ಎನ್ನಲಾಗಿದೆ.

- Advertisement -

Latest News

error: Content is protected !!